ಫೆಲೆಸ್ತೀನಿಯರನ್ನು ಬೇರೆಡೆಗೆ ವರ್ಗಾಯಿಸುವ ವಿಚಾರ: ಯುಎಇನಿಂದ ಪ್ರಬಲವಾಗಿ ವಿರೋಧ - Mahanayaka

ಫೆಲೆಸ್ತೀನಿಯರನ್ನು ಬೇರೆಡೆಗೆ ವರ್ಗಾಯಿಸುವ ವಿಚಾರ: ಯುಎಇನಿಂದ ಪ್ರಬಲವಾಗಿ ವಿರೋಧ

07/02/2025

ಫೆಲೆಸ್ತೀನಿಯರನ್ನು ಆ ರಾಷ್ಟ್ರದಿಂದ ಬೇರೆಡೆಗೆ ವರ್ಗಾಯಿಸುವ ಮತ್ತು ಅವರಿಗೆ ಹಕ್ಕುಗಳನ್ನು ನಿರಾಕರಿಸುವ ಎಲ್ಲ ಪ್ರಯತ್ನಗಳನ್ನು ಯುಎಇ ಪ್ರಬಲವಾಗಿ ವಿರೋಧಿಸುತ್ತದೆ ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ. ಪ್ರದೇಶದ ಸ್ಥಿರತೆಗೆ ಭಂಗ ಉಂಟು ಮಾಡುವ ಮತ್ತು ಶಾಂತಿಗೆ ಧಕ್ಕೆ ಉಂಟುಮಾಡುವ ಎಲ್ಲಾ ಕ್ರಮಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಂತಾರಾಷ್ಟ್ರೀಯ ನಿಯಮಗಳಿಗೆ ಎಲ್ಲರೂ ಬದ್ಧವಾಗಬೇಕು ಎಂದು ಆಗ್ರಹಿಸುತ್ತೇವೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಸದಾ ಬೆಂಬಲ ನೀಡುತ್ತೇವೆ ಮತ್ತು ಫೆಲಸ್ತೀನಿಯರ ಹಕ್ಕು ಮತ್ತು ಸ್ವಾತಂತ್ರ್ಯಗಳ ಪರ ದೃಢವಾಗಿ ನಿಲ್ಲುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸ್ವತಂತ್ರ ಫೆಲೆ ಸ್ತೀನ್ ರಾಷ್ಟ್ರ ನಿರ್ಮಾಣಕ್ಕೆ ಮತ್ತು ಇಸ್ರೇಲ್ ಹಾಗೂ ಫೆಲಸ್ತೀನ್ ನಡುವಿನ ಘರ್ಷಣೆಯನ್ನು ತಡೆಯುವುದಕ್ಕೆ ಯೋಜನೆಗಳನ್ನು ರೂಪಿಸಬೇಕಾಗಿದೆ. ದ್ವಿರಾಷ್ಟ್ರ ಪರಿಹಾರದ ಹೊರತಾಗಿ ಇಸ್ರೇಲ್ ಮತ್ತು ಫೆಲಸ್ತೀನ್ ನಡುವಿನ ಘರ್ಷಣೆಗೆ ಬೇರೆ ಪರಿಹಾರ ದಾರಿಗಳಿಲ್ಲ ಎಂದು ಯುಎಇ ಸ್ಪಷ್ಟಪಡಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ