ಉಚಿತವಾಗಿ ಲಸಿಕೆ ಕೊಟ್ಟರೂ ಜನ ಮೂರನೇ ಡೋಸ್ ಪಡೆಯುತ್ತಿಲ್ಲ: ಸಚಿವ ಸುಧಾಕರ್ ಬೇಸರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಪಡೆದವರು ಶೇ.17ರಷ್ಟು ಜನ ಮಾತ್ರವಾಗಿದ್ದು, ಉಚಿತವಾಗಿ ನೀಡಿದರೂ ಜನ ಲಸಿಕೆ ಪಡೆಯುತ್ತಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.
ಲಸಿಕೆ ಪಡೆದರೆ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾದರೂ ಸಾವು ಸಂಭವಿಸುವ ಸ್ಥಿತಿ ಸೃಷ್ಟಿಯಾಗಲ್ಲ. ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೊದಲ ಮತ್ತು ಎರಡನೇ ಡೋಸ್ ಲಸಿಕಾಕರಣ ಶೇ.100 ರಷ್ಟು ಆಗಿದೆ. ಆದರೆ, ಮೂರನೇ ಡೋಸ್ ಶೇಕಡ 17ರಷ್ಟು ಮಾತ್ರ ಆಗಿದೆ. ಪ್ರಧಾನಿ ಮೋದಿ ಉಚಿತವಾಗಿ ಲಸಿಕೆ ನೀಡಲು ಕ್ರಮ ಕೈಗೊಂಡಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka