ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ | ಒಬ್ಬನ ಬಂಧನ

ಮೈಸೂರು: ವ್ಯಕ್ತಿಯೊಬ್ಬ ಮುಸ್ಲಿಮ್ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಉದಯ ಗಿರಿಯ ತ್ರಿವೇಣಿ ವೃತ್ತದ ಬಳಿಯ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ಕೇಜ್ರಿವಾಲ್ ಅವರ ಭಾವ ಚಿತ್ರ ಹಾಕಿ ಪ್ರವಾದಿ ಬಗ್ಗೆ ಬರೆದು ಅವಹೇಳನಾಕಾರಿಯಾಗಿ ವಿಡಿಯೋ ಪೋಸ್ಟ್ ಮಾಡಿದ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆ ಸಂಬಂಧ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಸ್ಲಿಮ್ ಧಾರ್ಮಿಕ ಮುಖಂಡರು, ಶಾಂತಿ ಕಾಪಾಡುವಂತೆ ಕರೆ ನೀಡಿದರೂ, ಕೆಲವು ಯುವಕರು ರೊಚ್ಚಿಗೆದ್ದು ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕಿಡಿಗೇಡಿಗಳ ಕಲ್ಲೇಟಿನಿಂದ ಕೆಲವರಿಗೆ ಗಾಯವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: