ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು: ಸ್ಕೂಟರ್ ಸವಾರನ ದಾರುಣ ಸಾವು
ಉಡುಪಿ: ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಇಂದು ಸಂಜೆ ಅಂಬಾಗಿಲು ಸಮೀಪದ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ.
ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ಅಂಬಾಗಿಲಿನಿಂದ ಕಲ್ಸಂಕ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್ ಎದುರು ತನ್ನ ಸ್ಕೂಟರ್ ನಲ್ಲಿ ಡಿವೈಡರ್ ಬಳಿ ಸೂಚನೆ ನೀಡಿ ತಿರಗಿಸುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಮಾರುತಿ ಆಲ್ಟೋ ಕಾರು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು.
ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw