ಲಾರಿಗೆ ಡಿಕ್ಕಿ ಹೊಡೆದ ಬೈಕ್: ಕಾಲೇಜು ಮುಗಿಸಿ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು
ಉಡುಪಿ: ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್ರಜ್ಜ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.
ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕಿನಲ್ಲಿ ವಾಪಸ್ ಹೋಗುತ್ತಿದ್ದ ವೇಳೆ ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw