ಮನೆಯ ಮಾಡು ರಿಪೇರಿ ವೇಳೆ ಕೆಳಗೆ ಬಿದ್ದು ವ್ಯಕ್ತಿ ಸಾವು - Mahanayaka
10:57 AM Thursday 12 - December 2024

ಮನೆಯ ಮಾಡು ರಿಪೇರಿ ವೇಳೆ ಕೆಳಗೆ ಬಿದ್ದು ವ್ಯಕ್ತಿ ಸಾವು

death
18/01/2023

ಉಡುಪಿ: ನಗರದ ಕೋರ್ಟ್ ರಸ್ತೆಯಲ್ಲಿ ಜ.17ರಂದು ಮಧ್ಯಾಹ್ನ ಮನೆ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

ರಾಮಕೃಷ್ಣ ಪಡಿಯಾರ್(64) ಮೃತ ದುರ್ದೈವಿ. ಮದುವೆಯಾಗದೆ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ಇವರು, ಮನೆಯ ಮಾಡಿನ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರು ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದಿದ್ದಾರೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ