ಕಾರ್ಕಳ: ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಸಾವಿಗೆ ಶರಣು
ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಸಾವಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಮೃತಪಟ್ಟ ವ್ಯಕ್ತಿಯಾಗಿದ್ದು, ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು, ತನ್ನ ಮಾರುತಿ ಓಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ.
ನಿನ್ನೆ ರಾತ್ರಿ ತಮ್ಮನ ಮನೆಯಲ್ಲಿ ಮೆಂಹದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ್ದ ನಂತರ ಈ ಘಟನೆ ನಡೆದಿದ್ದು, ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw