ಉಡುಪಿ ಜಿಲ್ಲೆ ಬಂದ್‌ ಗೆ ಅವಕಾಶ ನೀಡುವುದಿಲ್ಲ: ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. - Mahanayaka

ಉಡುಪಿ ಜಿಲ್ಲೆ ಬಂದ್‌ ಗೆ ಅವಕಾಶ ನೀಡುವುದಿಲ್ಲ: ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ.

arun
30/09/2023

ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟ ಅ.3ರಂದು ಕರೆ ನೀಡಿರುವ ಉಡುಪಿ ಜಿಲ್ಲೆ ಬಂದ್‌ ಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.


Provided by

ಯಾವುದೇ ಬಂದ್‌ ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಆದುದರಿಂದ ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್, ಪ್ರತಿಭಟನೆ ಹಾಗೂ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ