ಉಡುಪಿ ಜಿಲ್ಲೆಯಾದ್ಯಂತ ಈದ್ ಮಿಲಾದ್ ಆಚರಣೆ: ಸಂದೇಶ ಜಾಥಾ
09/10/2022
ಉಡುಪಿ: ಪ್ರವಾದಿ ಮುಹಮ್ಮದ್ ಪೈಗಂಬರ್(ಸ.ಅ.)ರವರ ಜನ್ಮದಿನ ಈದ್ ಮಿಲಾದ್ ಆಚರಣೆಯು ಉಡುಪಿ ಜಿಲ್ಲೆಯಾದ್ಯಂತ ರವಿವಾರ ನಡೆಯಿತು.
ಕಾಪು, ಉಚ್ಚಿಲ, ಎರ್ಮಾಳ್, ಪಡುಬಿದ್ರಿ, ದೊಡ್ಡಣಗುಡ್ಡೆ, ಆತ್ರಾಡಿ, ಕುಂದಾಪುರ, ಕಾರ್ಕಳ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಮಿಲಾದ್ ರ‍್ಯಾಲಿಯಲ್ಲಿ ಮದ್ರಸಗಳ ವಿದ್ಯಾರ್ಥಿಗಳು, ದಫ್ ತಂಡ ಗಮನ ಸೆಳೆದವು. ಮಸೀದಿಯಿಂದ ಹೊರಟ ಜಾಥವು ಆಯಾ ಮಸೀದಿ ವ್ಯಾಪ್ತಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಕೆಲವು ಕಡೆ ಜಾಥದಲ್ಲಿ ಸಾಗಿ ಬಂದವರಿಗೆ ವಿವಿಧ ಧರ್ಮೀಯರು ತಂಪು ಪಾನೀಯ ನೀಡಿ ಸೌಹಾರ್ದತೆ ಮೆರೆದರು. ಜಾಥದಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka