ಉಡುಪಿ ಜಿಲ್ಲೆಯ 25 ನೇ ವರ್ಷದ ರಜತ ಮಹೋತ್ಸವ ಉದ್ಘಾಟಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್
ಉಡುಪಿ: ಜಿಲ್ಲಾಡಳಿತ ವತಿಯಿಂದ ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ 25 ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು.
ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ವಿಧಾನಪರಿಷತ್ ಶಾಸಕರುಗಳಾದ ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ನಗರದ ಬೋರ್ಡ್ ಶಾಲೆಯಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ಭವ್ಯ ಮೆರವಣಿಗೆ ನಡೆಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka