ಕಿತ್ತು ತಿನ್ನುವ ಬಡತನ, ಉದ್ಯೋಗವೂ ಇಲ್ಲ | ನೊಂದ ಅಣ್ಣ ತಮ್ಮ ಆತ್ಮಹತ್ಯೆಗೆ ಶರಣು
ಮೈಸೂರು: ಇಲ್ಲಿನ ಹೆಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ಅಣ್ಣ ತಮ್ಮಂದಿರಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಉದ್ಯೋಗವೂ ಇಲ್ಲ, ಮನೆಯ ಪರಿಸ್ಥಿತಿಯೂ ಚೆನ್ನಾಗಿರಲಿಲ್ಲ ಇದರಿಂದ ಮನನೊಂದು ಸಹೋದರರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಅಣ್ಣ ಸಿದ್ದರಾಜು ಹಾಗೂ ತಮ್ಮ ನಾಗರಾಜು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಮೊದಲು ಅಣ್ಣ ಸಿದ್ದರಾಜು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅಣ್ಣನ ಸಾವಿನ ಸುದ್ದಿ ಕೇಳಿ ತಮ್ಮನ್ನೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಷ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿನಾಗಿದ್ದ ನಾಗರಾಜುನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ತೀವ್ರವಾದ ಬಡತನವಿತ್ತು. ಇನ್ನೊಂದೆಡೆ ಉದ್ಯೋಗವೂ ಇರಲಿಲ್ಲ. ಇದರಿಂದ ನೊಂದು ಅಣ್ಣ ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡಿದ್ದು, ಅಣ್ಣನನ್ನು ಅಗಲಿ ಇರಲಾರದೇ ತಮ್ಮನೂ ಸಾವಿನ ದಾರಿ ಹಿಡಿದಿರುವುದಾಗಿ ತಿಳಿದು ಬಂದಿದೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ
ಆಟಿಕೆ ಗನ್ ತೋರಿಸಿ ಕಾರನ್ನೇ ಅಪಹರಿಸಿದ್ದ ಐವರು ಅರೆಸ್ಟ್!
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಕ್ಯಾಂಪಸ್ ಫ್ರಂಟ್ ತಹಶೀಲ್ದಾರ್ ಕಚೇರಿಗೆ ಮಾರ್ಚ್
ರಸ್ತೆ ಬದಿಯ 10 ಟನ್ ಸ್ಫೋಟಕ ತುಂಬಿದ್ದ ಲಾರಿ ನಿಂತದ್ದು ಕಂಡು ಬೆಚ್ಚಿಬಿದ್ದ ಜನರು!
“ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣವನ್ನು ಮದುವೆ, ಮುಂಜಿಗೂ ಬಾಡಿಗೆಗೆ ಕೊಡಬಹುದು”
ಅಸ್ಪೃಶ್ಯತೆ ಅನಿಷ್ಟ ಪದ್ಧತಿ ಅದನ್ನು ತೊಲಗಿಸೋಣ | ಗ್ರಾಮಸ್ಥರಿಗೆ ಪ್ರತಿಜ್ಞೆ ಮಾಡಿಸಿದ ಪೊಲೀಸರು