ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಉಕ್ರೇನ್‌ನಿಂದ ವಾಪಸಾದ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧಾರವಾಡ ಜಿಲ್ಲೆಯಲ್ಲಿ 4 ಜನ ವಿದೇಶದಲ್ಲಿದ್ದರು. ಈಗಾಗಲೇ ಇಬ್ಬರು ಮರಳಿದ್ದಾರೆ. ಇನ್ನಿಬ್ಬರು ಶೀಘ್ರದಲ್ಲಿಯೇ ರಾಜ್ಯಕ್ಕೆ ಸುರಕ್ಷಿತವಾಗಿ ಮರಳುವ ವಿಶ್ವಾಸವಿದೆ ಎಂದರು.
ಚೈತ್ರಾ ಬಂದಿರುವುದು ಶುಭ ಸಂದೇಶ, ಉಕ್ರೇನ್‌ನಿಂದ ಇನ್ನೂ 200ಕ್ಕೂ ಹೆಚ್ಚು ರಾಜ್ಯದ ವಿದ್ಯಾರ್ಥಿಗಳು ಆಗಮಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯಾರ್ಥಿಗಳು ಬರುವಂತಹ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಸಚಿವ ಜೈಶಂಕರ್ ಹಾಗೂ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿ ಮಾಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸಿದ್ದು ಮೋದಿಜಿ | ಸಚಿವ ಹಾಲಪ್ಪ
ಹರ್ಷ ಕೊಲೆ ಪ್ರಕರಣ: ಎನ್ ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ಅವರಿಗೆ ದ್ವಿತೀಯ ಸ್ಥಾನ
125 ಮಕ್ಕಳ ಹಾರ್ಟ್ ಸರ್ಜರಿಗೆ ನೆರವಾಗುತ್ತಿರುವ ಖ್ಯಾತ ನಟ ಮಹೇಶ್ ಬಾಬು