ಉಕ್ರೇನ್ ರಂಗಮಂದಿರದ ಮೇಲೆ ರಷ್ಯಾ ಬಾಂಬ್ ದಾಳಿ: ಮಕ್ಕಳು ಸೇರಿದಂತೆ ಸಾವಿರಾರು ಮಂದಿ ಸಾವು
ಕೀವ್: ಉಕ್ರೇನ್ ನ ಬಂದರು ನಗರ ಮಾರಿಯುಪೋಲ್ ನಲ್ಲಿ ಮಕ್ಕಳು ಸೇರಿದಂತೆ ಸಾವಿರಕ್ಕೂ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಿದ್ದ ರಂಗಮಂದಿರದ ಮೇಲೆ ರಷ್ಯಾ ಸೇನೆ ಬಾಂಬ್ ದಾಳಿ ನಡೆಸಿದೆ ಎಂದು ಉಕ್ರೇನ್ ಗುರುವಾರ ಹೇಳಿದೆ.
ಈ ರಂಗಮಂದಿರ ಹೊತ್ತಿ ಉರಿಯುತ್ತಿರುವ ಚಿತ್ರವನ್ನು ಉಕ್ರೇನ್ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ರಷ್ಯಾ ಆಕ್ರಮಣಕಾರರು ರಂಗಮಂದಿರವನ್ನು ನಾಶಪಡಿಸಿದ್ದಾರೆ. ಅದರಲ್ಲಿ ಮಕ್ಕಳೂ ಸೇರಿದಂತೆ ಸಾವಿರಾರು ಮಂದಿ ಆಶ್ರಯ ಪಡೆಯುತ್ತಿದ್ದರು. ಇದನ್ನು ನಾವು ಎಂದಿಗೂ ಕ್ಷಮಿಸುವುದಿಲ್ಲ ಎಂದು ಮಾರಿಯುಪೋಲ್ ನಗರ ಕೌನ್ಸಿಲ್ ಟೆಲಿಗ್ರಾಮ್ ಪೋಸ್ಟ್‌ನಲ್ಲಿ ಹೇಳಿದೆ.
ಇದೇ ವೇಳೆ ಉಕ್ರೇನ್ ನ ರಂಗಮಂದಿರದ ಮೇಲೆ ಬಾಂಬ್ ದಾಳಿ ಮಾಡಿರುವ ರಷ್ಯಾದ ಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಶಾಂತಿ ಮಾತುಕತೆ ನಡೆಸುತ್ತಿರುವ ಸಂದರ್ಭದಲ್ಲಿಯೇ ರಷ್ಯಾ ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿದ್ದು, ವ್ಲಾದಿಮಿರ್ ಪುಟಿನ್ ಯುದ್ಧಾಪರಾಧಿ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ವಾಗ್ದಾಳಿ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕರ್ನಾಟಕ ರಾಜ್ಯ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ: 2022
ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ: ಮೇಘಾಲಯ ಹೈಕೋರ್ಟ್
ಜಪಾನ್ ನಲ್ಲಿ ಭಾರೀ ಭೂಕಂಪ: ನಾಲ್ವರ ಸಾವು, 90 ಮಂದಿಗೆ ಗಾಯ
ಹಿಜಾಬ್ ಗೆ ಅವಕಾಶ ಕೋರಿ ಕರ್ನಾಟಕ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ