ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು
ಕೀವ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ಯುದ್ಧ ಮುಂದುವರಿಸಿದ್ದು, ಇಂದು ಬೆಳಗ್ಗೆ ರಷ್ಯಾ ನಡೆಸಿರುವ ವೈಮಾನಿಕ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.
ರಷ್ಯಾದ ಪಡೆಗಳು ಸೋಮವಾರ ಉಕ್ರೇನ್‌ನ ಎರಡನೇ ಅತಿದೊಡ್ಡ ನಗರದ ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ಉಭಯ ದೇಶಗಳ ನಡುವಿನ ಮಾತುಕತೆಗಳು ವಿಫಲವಾಗಿದ್ದು, ಈಗ ಬಂದ ಮಾಹಿತಿಯ ಪ್ರಕಾರ ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಈತನನ್ನು ಭಾರತದ ಕರ್ನಾಟಕದ ನವೀನ್ ಎಂದು ಗುರುತಿಸಲಾಗಿದೆ. ನವೀನ್ ಮತ್ತು ಅವನ ಸ್ನೇಹಿತ ಪಶ್ಚಿಮ ಗಡಿಯ ಎಲ್ವಿವ್‌ಗೆ ತೆರಳಲು ರೈಲು ನಿಲ್ದಾಣಕ್ಕೆ ತೆರಳಿದ್ದರು ಎಂದು ವರದಿಯಾಗಿದೆ.
ಯುದ್ಧಪೀಡಿತ ಉಕ್ರೇನ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ 8 ಮಂದಿ ವಿದ್ಯಾರ್ಥಿಗಳು ಭಾರತಕ್ಕೆ ವಾಪಸಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 45 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದಂತಾಗಿದೆ. ಮೊದಲ ದಿನ ಮುಂಬೈ ಮೂಲಕ 12 ಮಂದಿ ವಿದ್ಯಾರ್ಥಿಗಳು ವಾಪಸಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೆಂಪುಕೋಟೆ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ
ಪ್ರೀತಿಗೆ ಪೋಷಕರ ವಿರೋಧ: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ
ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ: ವಿದೇಶಿ ಪ್ರಜೆ ಸೆರೆ
ಫುಡ್ ಡೆಲಿವರಿ ಬಾಯ್ ಅಪಹರಣ: 6 ಮಂದಿ ಆರೋಪಿಗಳ ಬಂಧನ
ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ