ಉಕ್ರೇನ್ ರೈಲು ನಿಲ್ದಾಣಕ್ಕೆ ರಾಕೆಟ್ ದಾಳಿ ನಡೆಸಿದ ರಷ್ಯಾ: 30 ಜನರ ದುರ್ಮರಣ
ಕೀವ್: ಉಕ್ರೇನ್ ಮೇಲೆ ರಷ್ಯಾದ ದಾಳಿ ಮುಂದುವರಿದ್ದು, ರೈಲು ನಿಲ್ದಾಣದ ಮೇಲೆ ನಡೆದ ರಾಕೆಟ್ ದಾಳಿಯಲ್ಲಿ ಸುಮಾರು 30 ಜನರು ಮೃತಪಟ್ಟ ಘಟನೆ ಪೂರ್ವ ಉಕ್ರೇನ್ ನ ಕ್ರಮತೋರ್ಸಕ್ ನಗರದಲ್ಲಿ ಶುಕ್ರವಾರ ನಡೆದಿದೆ.
ರಷ್ಯಾ ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ನಾಗರಿಕರನ್ನು ಉಕ್ರೇನ್ ಸ್ಥಳಾಂತರ ಮಾಡುತ್ತಿತ್ತು. ಇದೇ ವೇಳೆಯಲ್ಲಿ ರಷ್ಯಾ ರಾಕೆಟ್ ದಾಳಿ ನಡೆಸಿದ್ದು, ಪರಿಣಾಮವಾಗಿ 30 ಜನರು ಮೃತಪಟ್ಟು ನೂರಕ್ಕೂ ಅಧಿಕ ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ರೈಲ್ವೇ ತಿಳಿಸಿದೆ.
ಈ ಘಟನೆಯ ಬಗ್ಗೆ ರಷ್ಯಾ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಫೆ.24ರಂದು ಉಕ್ರೇನ್ ಮೇಲೆ ದಾಳಿ ಆರಂಭಿಸಿದ ನಂತರ ತಾನು ನಾಗರಿಕರನ್ನು ಗುರಿಯಾಗಿಸಿ ಯಾವುದೇ ದಾಳಿ ನಡೆಸಿಲ್ಲ ಎಂದು ರಷ್ಯಾ ಹೇಳಿಕೊಂಡಿದೆ.
ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧವಾಗುತ್ತಿದ್ದಂತೆಯೇ ನಾಗರಿಕರನ್ನು ಗುರಿಯಾಗಿಸಿ ರಷ್ಯಾ ದಾಳಿ ನಡೆಸಿದೆ ಎನ್ನಲಾಗುತ್ತಿದೆ. ರೈಲು ನಿಲ್ದಾಣಕ್ಕೆ 2 ರಾಕೆಟ್ ಗಳು ಅಪ್ಪಳಿಸಿದೆ ಎಂದು ಸ್ಥಳೀಯ ಗವರ್ನರ್ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂಗಳೂರು: ನಡು ರಸ್ತೆಯಲ್ಲಿ ಬೆಂಕಿ ಹತ್ತಿಕೊಂಡು ಉರಿದ ಬಸ್
ಮುಸ್ಲಿಮ್ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ ಸ್ವಾಮೀಜಿ
ಶಾರುಖ್ ಮತ್ತು ಪ್ರಿಯಾಂಕಾಗಿಂತ, ನಾನೇ ಸೂಪರ್ ಹೋಸ್ಟ್: ತನ್ನನ್ನು ತಾನೇ ಹೊಗಳಿಕೊಂಡ ಕಂಗನಾ
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ
ಕುವೈತ್ ನಲ್ಲಿ ವಿಜಯ್ ನಟನೆಯ ಬೀಸ್ಟ್ ಚಿತ್ರಕ್ಕೆ ನಿಷೇಧ: ಕಾರಣ ಏನು ಗೊತ್ತಾ?