ತಮಿಳುನಾಡು ಬಿಜೆಪಿ ಮಹಿಳೆಯರಿಗೆ ಸುರಕ್ಷಿತವಲ್ಲ: ಅಣ್ಣಾಮಲೈ ವಿರುದ್ಧ ಬಿಜೆಪಿ ನಾಯಕಿ ಗಂಭೀರ ಆರೋಪ!
ಚೆನ್ನೈ: ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡು ಬಿಜೆಪಿ ಘಟಕ ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಬಿಜೆಪಿಗೆ ಮಂಗಳವಾರ ರಾಜೀನಾಮೆ ನೀಡಿದ್ದು, ಗಾಯತ್ರಿ ಅವರೇ ಟ್ವೀಟ್ ಮಾಡಿ ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ತಮ್ಮ ರಾಜೀನಾಮೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದು, ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ, ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮೋದಿಜಿ ನೀವು ವಿಶೇಷ, ನೀವು ರಾಷ್ಟ್ರಪಿತ, ನೀವು ಯಾವಾಗಲೂ ನನ್ನ ವಿಶ್ವಗುರು ಮತ್ತು ಮಹಾನ್ ನಾಯಕ. ಅಮಿತ್ ಶಾ ಜೀ ನೀವು ಯಾವತ್ತೂ ನನ್ನ ಚಾಣಕ್ಯ ಗುರುಗಳಾಗಿಯೇ ಇರುತ್ತೀರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಣ್ಣಾಮಲೈ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ, 6 ತಿಂಗಳು ಅಮಾನತು ಮಾಡಿ ಪಕ್ಷದಿಂದ ದೂರವಿರಿಸಿದರು. ಪಕ್ಷದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಇನ್ನೂ ಗಾಯತ್ರಿ ರಘುರಾಮ್ ಅವರ ಆರೋಪಗಳನ್ನು ತಳ್ಳಿ ಹಾಕಿರುವ ಅಣ್ಣಾಮಲೈ, ಆಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ, ಆಕೆಯ ಆರೋಪಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw