ಚಿನ್ನಾಭರಣದ ಮಳಿಗೆಗೆ ನುಗ್ಗಿ ಅನೈತಿಕ ಪೊಲೀಸ್ ಗಿರಿ: ನಾಲ್ವರು ಅರೆಸ್ಟ್ - Mahanayaka
11:03 AM Thursday 12 - December 2024

ಚಿನ್ನಾಭರಣದ ಮಳಿಗೆಗೆ ನುಗ್ಗಿ ಅನೈತಿಕ ಪೊಲೀಸ್ ಗಿರಿ: ನಾಲ್ವರು ಅರೆಸ್ಟ್

sanghapariwar
11/12/2022

ಮಂಗಳೂರು: ಚಿನ್ನಾಭರಣದ ಮಳಿಗೆಯೊಂದಕ್ಕೆ ನುಗ್ಗಿ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದ ಸಂಘಪರಿವಾರದ ಕಾರ್ಯಕರ್ತರು ಎನ್ನಲಾದ ನಾಲ್ಕು ಮಂದಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂದು ಗುರುತಿಸಲಾಗಿದೆ. ಅನೈತಿಕ ಪೊಲೀಸ್‌ ಗಿರಿಯನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ ಬೆನ್ನಿಗೆ ಈ ನಾಲ್ವರ ಬಂಧನವಾಗಿದೆ ಎಂದು ಹೇಳಲಾಗಿದೆ.

ಚಿನ್ನಾಭರಣ ಮಳಿಗೆಯ ಮಾರಾಟ ವಿಭಾಗದ ಯುವಕ ಮತ್ತು ಯುವತಿಯು ಅನ್ಯೋನ್ಯತೆಯಿಂದಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಗುಂಪು ಡಿಸೆಂಬರ್ 6ರ ಸಂಜೆ ಯುವತಿಯ ಪೋಷಕರೊಂದಿಗೆ ಚಿನ್ನಾಭರಣದ ಮಳಿಗೆಗೆ ನುಗ್ಗಿ ಪೊಲೀಸರ ಸಮ್ಮುಖವೇ ಹಲ್ಲೆ ನಡೆಸಿತ್ತು ಎಂದು ಆರೋಪಿಸಲಾಗಿತ್ತು. ಈ ಕದ್ರಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ