ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳು ಖಾಲಿ: ಕನ್ನಡ ಭಾಷೆ ಬರುವವರು ಅರ್ಜಿ ಸಲ್ಲಿಸಿ

union bank
26/10/2024

Union Bank Recruitment 2024 — ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ 10 ರಾಜ್ಯಗಳ ಯೂನಿಯನ್ ಬ್ಯಾಂಕ್ ನಲ್ಲಿ  ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು 1,500 ಹುದ್ದೆಗಳು ಖಾಲಿಯಿದ್ದು, ಕರ್ನಾಟಕ ರಾಜ್ಯಕ್ಕೆ 300 ಹುದ್ದೆಗಳನ್ನು ಮೀಸಲಿಡಲಾಗಿದೆ. ಪದವಿಯ ಜೊತೆ ಕನ್ನಡ ಓದಲು ಬರೆಯಲು ಬರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.

ಶೈಕ್ಷಣಿಕ ಮತ್ತು ವಯೋಮಿತಿಯ ಅರ್ಹತೆಗಳ ವಿವರ :

Union Bank Local Bank Officer’s Recruitment 2024 — ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು. ವಯೋಮಿತಿ ಅರ್ಹತೆ ನೋಡುವುದಾದರೆ ಕನಿಷ್ಠ 20 ಹಾಗೂ ಗರಿಷ್ಠ 30 ವರ್ಷದ ಒಳಗೆ ಇರಬೇಕು.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ ಹಾಗೂ ವಿವಿಧ ಸೌಲಭ್ಯಗಳು :

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,480ರೂ. ಯಿಂದ 85,920ರೂ. ವರೆಗೆ ವೇತನ ಸಿಗುತ್ತದೆ ಹಾಗೂ ಅದರ ಜೊತೆಗೆ ಮನೆ ಬಾಡಿಗೆ ಭತ್ಯೆ, ವೈದ್ಯಕೀಯ ವೆಚ್ಚ ಮರುಪಾವತಿ, ವಿಶೇಷ ಭತ್ಯೆ, ತುಟ್ಟಿ ಭತ್ಯೆ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ.

 ಅರ್ಜಿ ಸಲ್ಲಿಕೆಗೆ ಅರ್ಜಿ ಶುಲ್ಕ :

ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ₹850ರೂ. ಪಾವತಿಸಬೇಕು.

*  ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ₹175ರೂ. ಪಾವತಿಸಬೇಕು.

ಅರ್ಜಿ ಸಲ್ಲಿಸಲು ನವೆಂಬರ್ 13, 2024 ಕೊನೆಯ ದಿನಾಂಕವಾಗಿರುತ್ತದೆ.

ಅರ್ಜಿ ಸಲ್ಲಿಕೆಗೆ ಅವಶ್ಯಕ ಲಿಂಕ್ : https://bit.ly/40gwDiQ


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version