ಕೇಂದ್ರ ಬಜೆಟ್: ಅಲ್ಪಸಂಖ್ಯಾತ ವರ್ಗದ ವಿರೋಧಿ ಬಜೆಟ್– ಎಂ.ಪಿ.ಮೊಯಿದಿನಬ್ಬ
ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ವರ್ಗದ ವಿರೋಧಿ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಗೆ 38% ಅನುದಾನ ಕಡಿತ ಮಾಡುವ ಮೂಲಕ ಸಾಬೀತು ಪಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ ಹೇಳಿದ್ದಾರೆ.
2022-23 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಗೆ 5020.50 ಕೋಟಿ ಮೀಸಲಿಟ್ಟಿದ್ದರೆ 2023_24 ನೇ ಸಾಲಿಗೆ 3097.60 ಕೋಟಿ ಮಾತ್ರ ನಿಗದಿಮಾಡಿರುವುದು ಅಲ್ಪಸಂಖ್ಯಾತ ಸಮುದಾಯಗಳನ್ನು ಆರ್ಥಿಕ ಮತ್ತು ಶೆೃಕ್ಷಣಿಕವಾಗಿ ಇನ್ನಷ್ಟು ದುರ್ಬಲಗೊಳಿಸುವ ಹುನ್ನಾರವಾಗಿದೆ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw