ಸಹೋದರನ ವಿರುದ್ಧ ಫ್ರಾಡ್ ಕೇಸ್: ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಟಿಕೆಟ್ ಕೊಡಿಸುವುದಾಗಿ ನಂಬಿಸಿ 1 ಕೊಟಿ 75 ಲಕ್ಷ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಕೇಳಿ ಬಂದಿದೆ.
ಮಾಜಿ ಶಾಸಕ ದೇವಾನಂದ ಚೌಹಾಣ್ ಪತ್ನಿ ಸುನಿತಾ ಚೌಹಾಣ್ ಎನ್ನುವವರು ಗೋಪಾಲ್ ಜೋಶಿ ವಿರುದ್ಧ ದೂರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಹ್ಲಾದ್ ಜೋಶಿ, ಗೋಪಾಲ್ ಜೋಶಿ ಪ್ರಕರಣಕ್ಕೂ, ನನಗೂ ಸಂಬಂಧವಿಲ್ಲ ಎಂದಿದ್ದಾರೆ.
ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ. ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ನನಗೆ ಯಾರೂ ಸಹೋದರಿ ಇಲ್ಲ. ವಿಜಯಲಕ್ಷ್ಮಿ ಯಾರೆಂಬುದೇ ಗೊತ್ತಿಲ್ಲ. ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು ಇದ್ದೀವಿ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ
ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಂಬಂಧವಿಲ್ಲ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಏನಿದು ಕೇಸ್?
2018ರಲ್ಲಿ ನಾಗಠಾಣಾ ಕ್ಷೇತ್ರದಿಂದ ದೇವಾನಂದ್ ಚೌಹಾಣ್ ಜೆಡಿಎಸ್ ಪಕ್ಷದ ಶಾಸಕರಾಗಿದ್ದರು, ಆದರೆ 2023ರಲ್ಲಿ ಸೋಲು ಕಂಡಿದ್ದರು. ಆ ಬಳಿಕ ದೇವಾನಂದ್ ದಂಪತಿ ಗೋಪಾಲ್ ಜೋಶಿಯವರನ್ನು ಭೇಟಿ ಮಾಡಿದ್ದರಂತೆ. ಈ ವೇಳೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸ್ತೀನಿ ಅಂತ ಹಂತ ಹಂತವಾಗಿ 1 ಕೋಟಿ 75 ಲಕ್ಷ ಹಣ ಪಡೆದು ವಂಚಿಸಿದ್ದಾರೆ ಅಂತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸದ್ಯ ಮಾಜಿ ಶಾಸಕ ದೇವಾನಂದ್ ಚೌಹಾಣ್ ಪತ್ನಿಯಾಗಿರುವ ಸುನೀತಾ ಚೌಹಾಣ್ ಅವರು ನೀಡಿದ ದೂರಿನನ್ವಯ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ವಂಚನೆ, ಜಾತಿ ನಿಂದನೆ ಆರೋಪದಡಿ FIR ದಾಖಲಾಗಿದೆ. ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: