ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ - Mahanayaka

ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

c.m siddaramaya
15/08/2023

ಬೆಂಗಳೂರು:ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು.


Provided by

ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು,ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ ಎಂಬುದನ್ನು ಮರೆಯಬಾರದು ಎಂದರು.

0 ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ.


Provided by

ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.

ಕತ್ತಿ ಪರದೇಶಿಯಾದರೆ ಮಾತ್ರ ನೋವೆ?ನಮ್ಮವರೆ ಹದಹಾಕಿ ತಿವಿದರದು ಹೂವೆ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೆಲ್ಲ ಮನಗಂಡೆ ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೆ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮತ್ರ್ಯಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯೆ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆಂದು ತಿಳಿಸಿದರು.

ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ.ಕರ್ನಾಟಕದ ಜನರು ಒಡೆದಾಳುವವರ ವಿರುದ್ಧ ನಿಂತಿದ್ದಾರೆ. ಇವನಾರವನೆನ್ನದೆ ಒಳಗೊಂಡು ಆಡಳಿತ ಮಾಡುವ ನಮ್ಮನ್ನು ಆರಿಸಿದ್ದಾರೆ. ಈ ಸ್ವಾತಂತ್ರ್ಯ ದಿನದಂದು ನಾನು ನೀಡುವ ಭರವಸೆಯಲ್ಲಿ ಬಹಳ ಮುಖ್ಯವಾದುದು ಈ ಒಳಗೊಂಡು ಬಾಳುವ, ಎಲ್ಲರ ಅಭಿವೃದ್ಧಿಯನ್ನು ಬಯಸುವ ಕರ್ನಾಟಕದ ಹೊಸ ಮಾದರಿಗಳನ್ನು ಪ್ರಬಲಗೊಳಿಸುವ ಭರವಸೆಯೇ ಆಗಿದೆ.

ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೆ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮತ್ರ್ಯಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯೆ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆಂದು ತಿಳಿಸಿದರು.

ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ.

Gandhi’s talisman ಎಂದು ಹೆಸರಾದ ಚಿಂತನೆಯ ನೆರಳಲ್ಲೇ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಯಾವುದೇ ಯೋಜನೆ ಜಾರಿಗೊಳಿಸುವಾಗ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಇದರಿಂದ ಅನುಕೂಲವಾಗುವುದೇ? ಸಾಮಾಜಿಕ ನ್ಯಾಯ ಪಾಲನೆಯಾಗಿದೆಯೇ? ಎಂದು ಯೋಚಿಸಿಯೇ ಮುಂದಡಿಯಿಡುವುದು ನಮ್ಮ ಆಡಳಿತದ ಅಂತಃಸತ್ವವಾಗಿದೆ.

ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಸರ್ಕಾರ ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾರಂಭಿಸಿ ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ.

ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ. ಇದೂವರೆಗೆ 38.54 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಎರಡನೇ ಗ್ಯಾರಂಟಿ ಯೋಜನೆ, 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ. ಈ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್‍ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ನಾವು ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸುತ್ತಿದ್ದೇವೆ.

ಹಸಿವು ಮುಕ್ತ ಕರ್ನಾಟಕದ ಕಲ್ಪನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಜಾರಿಗೊಳಿಸಿರುವ ಮತ್ತೊಂದು ಗ್ಯಾರಂಟಿ ಯೋಜನೆ ‘ಅನ್ನ ಭಾಗ್ಯʼ. ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ.

ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಲ್ಲವು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ದಿನಾಂಕ ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ.

ಪದವಿ, ಡಿಪ್ಲೊಮಾ ಪಡೆದ ಯುವಕರಿಗೆ ಕೂಡಲೇ ಉದ್ಯೋಗ ದೊರೆಯದಿದ್ದರೆ, ನಿರಾಶರಾಗದಂತೆ, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ, ಬೆಂಬಲ ನೀಡುವ ಯೋಜನೆ ಯುವನಿಧಿ. ಶಿಕ್ಷಣ ಪಡೆದು ಆರು ತಿಂಗಳಾದರೂ ಉದ್ಯೋಗ ದೊರೆಯದ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಠ ಎರಡು ವರ್ಷದವರೆಗೆ, ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. 2022-23ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಈ ಯೋಜನೆ ಜಾರಿಯಾಗಲಿದೆ.

ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಬರಲಿದೆ. ಜಾತಿ, ಮತ, ವರ್ಗ, ವರ್ಣ ಭೇದವಿಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ.

ಈ ಕೋಟಿ, ಕೋಟಿ ಜನರಿಗೆ ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ. ಮತ್ತು ಸಮಗ್ರ ಮಹಿಳಾ ಸಶಕ್ತೀಕರಣ ಸಾಧ್ಯವಾಗಲಿದೆ. ಇದರಿಂದ ಕರ್ನಾಟಕ ಮಾದರಿ ಅಭಿವೃದ್ಧಿ ವ್ಯಾಖ್ಯಾನವು ಪ್ರಾರಂಭವಾಗಲಿದೆ. ನಮ್ಮ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಸಂಪನ್ಮೂಲಗಳನ್ನು ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸಲು ಬದ್ಧವಾಗಿದೆ. ಸರ್ಕಾರದ ಆದಾಯಗಳ ಸಂಗ್ರಹವು ಸಹ ಶಕ್ತಿಯುತವಾಗಿದೆ.

ಡಾ.ಬಿ.ಆರ್. ಅಂಬೇಡ್ಕರ್ ಅವರು “ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿದೆ. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳನ್ನು ಬದುಕಿನ ತತ್ವಗಳೆಂದು ಗುರುತಿಸುವ ಜೀವನ ವಿಧಾನವಾಗಿದೆ” ಎಂದು ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವ ಗಟ್ಟಿಯಾಗಿರಬೇಕಾದರೆ ಅದರ ತಳಹದಿಯಾದ ಸಾಮಾಜಿಕ ಪ್ರಜಾಪ್ರಭುತ್ವವು ಸುಭದ್ರವಾಗಿರಬೇಕು ಎಂಬ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದೆ.

ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.

ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ.

ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ವಿಶೇಷ ಯೋಜನೆ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ರದ್ದುಪಡಿಸುವ ಮೂಲಕ ಡೀಮ್ಡ್ ವೆಚ್ಚದ ಹೆಸರಲ್ಲಿ ಈ ಸಮುದಾಯಗಳಿಗೆ ಮೀಸಲಿರುವ ಅನುದಾನ ಇತರೆ ಕಾರ್ಯಗಳಿಗೆ ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.

ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.

ಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಜನರಿಗೆ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಾಲ-ಸಹಾಯಧನ ಸೌಲಭ್ಯ ನೀಡಲಾಗುವುದು.

ದಮನಿತ ವರ್ಗಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪರಿಶಿಷ್ಟ ಜಾತಿ/ ಪಂಗಡಗಳ ಜನರಿಗೆ ನೀಡುತ್ತಿದ್ದ ಗುತ್ತಿಗೆ ಮೊತ್ತದ ಮಿತಿಯನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ.ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಲಾಗುವುದು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣವನ್ನು ಕೈಗೊಳ್ಳಲು 200 ಕೋಟಿ ರೂ. ಒದಗಿಸಲಾಗಿದೆ. ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ತೀರ್ಮಾನಿಸಿದ್ದೇವೆ.

ನಮ್ಮ 5 ವರ್ಷಗಳ ಅವಧಿಯಲ್ಲಿ ಅಗತ್ಯ ಇರುವವರಿಗೆ ಸೂರು ನೀಡಲು ಯೋಜಿಸಿದ್ದೇವೆ. ಸರ್ಕಾರಿ ಬಸ್ಸುಗಳ ಟ್ರ್ಯಾಕಿಂಗ್ ವ್ಯವಸ್ಥೆ, ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದೇವೆ. ಅಗತ್ಯ ಇರುವೆಡೆ ಹೊಸ ಬಸ್ಸುಗಳನ್ನು ಒದಗಿಸಲು ಸಿದ್ಧರಿದ್ದೇವೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಿದ್ದೇವೆ.

ಹೈನುಗಾರಿಕೆಯನ್ನು ಉತ್ತೇಜಿಸಿ ಗ್ರಾಮೀಣ ಆರ್ಥಿಕತೆಗೆ ಚೈತನ್ಯ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿಗಳಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ರೈತರಿಗೆ ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಕ್ಷೇತ್ರದ ಬಲವರ್ಧನೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ‌‌ ಎಂದು ತಮ್ಮ‌ಸರ್ಕಾರದ ಮುಂದಿನ ಯೋಜನೆಗಳನ್ನು ತಿಳಿಸುತ್ತಾ ಸಿಎಂ‌ಎಲ್ಲರಿಗೂ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ