ಜುಲೈ 5ರಿಂದ ಮತ್ತೆ ಅನ್ ಲಾಕ್: ಯಾವುದಕ್ಕೆಲ್ಲ ಅವಕಾಶ ನೀಡಲಾಗಿದೆ? - Mahanayaka

ಜುಲೈ 5ರಿಂದ ಮತ್ತೆ ಅನ್ ಲಾಕ್: ಯಾವುದಕ್ಕೆಲ್ಲ ಅವಕಾಶ ನೀಡಲಾಗಿದೆ?

yediyurappa
04/07/2021

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್ ಡೌನ್ ನನ್ನು ಸರ್ಕಾರ ಹಂತ ಹಂತವಾಗಿ ಅನ್ ಲಾಕ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ 5ರಿಂದ ಜುಲೈ 19ರವರೆಗೆ ಹೊಸ ನಿಯಮವನ್ನು ಜಾರಿ ಮಾಡಲಾಗಿದೆ.

ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಮಾಲ್‌ ಗಳನ್ನುತೆರೆಯಲು ಅವಕಾಶ ನೀಡಲಾಗಿದೆ.

ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.




ನೈರ್ಟ್ ಕರ್ಫ್ಯೂ ರಾತ್ರಿ 9ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಇನ್ನೂ ಜಿಲ್ಲೆಗಳಲ್ಲಿರುವ ಪರಿಸ್ಥಿತಿಗೆ ಅನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳ ಅವಶ್ಯಕತೆ ಇದ್ದಲ್ಲಿ ಸಚಿವರೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ. ಈ ಅವಧಿಗಳನ್ನು ಕೊರೊನಾ ತಡೆಗೆ ಸಂಬಂಧಿಸಿದಂತೆ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಶುಚಿತ್ವಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ