ವಿಜಯ ಸಂಕಲ್ಪ ಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಜನಬೆಂಬಲ: ಸಿ.ಟಿ.ರವಿ - Mahanayaka

ವಿಜಯ ಸಂಕಲ್ಪ ಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಜನಬೆಂಬಲ: ಸಿ.ಟಿ.ರವಿ

c t ravi
09/03/2023


Provided by

ಯಾದಗಿರಿ: ವಿಜಯ ಸಂಕಲ್ಪ ಯಾತ್ರೆಯು ಈಗಾಗಲೇ 75ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಂಚರಿಸಿದ್ದು, ಯಾತ್ರೆ ಉದ್ದಗಲಕ್ಕೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು.


Provided by

ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮಾಹಿತಿ ಕೊಡಲಾಗುತ್ತಿದೆ. ಜನಬೆಂಬಲದ ಜೊತೆಗೆ ನಮ್ಮ ಕಾರ್ಯಗಳು ಪಕ್ಷ ಮತ್ತೊಮ್ಮೆ ಗೆಲ್ಲುವ ವಿಶ್ವಾಸವನ್ನು ನೀಡಿದೆ ಎಂದು ತಿಳಿಸಿದರು.

13 ತಿಂಗಳ ಕಾಲ ಜೆಡಿಎಸ್- ಕಾಂಗ್ರೆಸ್‍ನ ಅಸ್ಥಿರ, ವೈಯಕ್ತಿಕ ಹಿತಾಸಕ್ತಿಯ ಸರಕಾರ ಇತ್ತು. ಬಳಿಕ ಯಡಿಯೂರಪ್ಪ- ಬೊಮ್ಮಾಯಿ ಸರಕಾರವು ಅಭಿವೃದ್ಧಿ ಕಾರ್ಯಗಳ ಜೊತೆ ಸ್ಥಿರ ಸರಕಾರವನ್ನು ಕೊಟ್ಟಿದೆ ಎಂದು ತಿಳಿಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಕೊಟ್ಟರು. ಬಿಜೆಪಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಲ್ಲಿ ಮನವಿ ಮಾಡಿದರು.


Provided by

ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕ ನರಸಿಂಹ ನಾಯಕ್ (ರಾಜುಗೌಡ), ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾರುತಿ ರಾವ್ ಮುಳೆ, ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಯಾದಗಿರಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲ್ ರೆಡ್ಡಿ, ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವೇಂದ್ರ ನಾಥ್ ನಾದ ಹಾಗೂ ಯಾದಗಿರಿ ಜಿಲ್ಲೆಯ ಬಿಜೆಪಿ ಸ್ಥಳೀಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬಳಿಕ ವಿಜಯ ಸಂಕಲ್ಪ ಯಾತ್ರೆ ರೋಡ್ ಷೋ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಮಟ್ಟದ ನಾಯಕರು ಭಾಗವಹಿಸಿದ್ದು, ಸಾವಿರಾರು ಜನ ಕಾರ್ಯಕರ್ತರು ಮತ್ತು ಜನರು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ