ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ - Mahanayaka
2:21 AM Thursday 23 - January 2025

ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

up election
10/02/2022

ಲಕ್ನೊ: ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮತದಾನ ನಡೆಯಲಿದೆ. ಇಂದು ಮೊದಲ ಹಂತದಲ್ಲಿ 403 ಕ್ಷೇತ್ರಗಳ ಪೈಕಿ 11 ಜಿಲ್ಲೆಗಳ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೊದಲ ಹಂತದ ಈ ಚುನಾವಣೆ ಪಶ್ಚಿಮ ಉತ್ತರ ಪ್ರದೇಶದಲ್ಲಿದ್ದು, ಇದು ಉಳಿದ ಹಂತದ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಮೂರು ಕೃಷಿ ಕಾನೂನುಗಳು ಮತ್ತು ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಈ ಪ್ರದೇಶದಲ್ಲಿ ಬಿಜೆಪಿ ಕಷ್ಟ ಎದುರಿಸಲಿದ್ದು, ಜಾಟ್ ಮತ್ತು ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು, ಬಿಎಸ್‍ ಪಿ ಮುಸ್ಲಿಂ ಮತಗಳನ್ನು ಕೇಂದ್ರಿಕರಿಸಿದೆ.

ಮುಜಾಫರ್​ನಗರ, ಮೀರತ್, ಭಾಗಪತ್, ಗಾಜಿಯಾಬಾದ್​, ಶಾಮ್ಲಿ, ಹಂಪೂರ್, ಗೌತಮ್ ಬುದ್ಧನಗರ, ಬುಲದ್​ಶಹರ್​, ಅಲಿಘಡ, ಆಗ್ರಾ ಮತ್ತು ಮಥುರಾದಲ್ಲಿ ಮತದಾನವಾಗಲಿದೆ. ಪಟ್ಟು 623 ಅಭ್ಯರ್ಥಿಗಳು ತಮ್ಮ ಭವಿಷ್ಯ ನಿರ್ಧರಿಸಿಕೊಳ್ಳಲಿದ್ದು, ಒಟ್ಟು 2.27 ಕೋಟಿ ಜನರು ಮತದಾನ ಮಾಡಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಮಾನತೆ ಕಾಣಬೇಕಾದರೆ ಸರ್ಕಾರಿ ಕಚೇರಿಗಳಲ್ಲಿರುವ ದೇವರ ಫೋಟೋ ಕೂಡ ತೆಗೆಯಿರಿ: ನಟ ಚೇತನ್

ಟಿಕ್ ಟಾಕ್ ಅಜ್ಜಿ ಎಂದೇ ಪ್ರಖ್ಯಾತರಾಗಿದ್ದ ಕಮಲಜ್ಜಿ ಇನ್ನಿಲ್ಲ

ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

ವಿದೇಶಕ್ಕೆ ಹೋಗುವುದಾಗಿ ಹೇಳಿ, ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ!

ಮರದ ಕೊಂಬೆ ಬಿದ್ದು ಸ್ಥಳದಲ್ಲೇ ಯುವಕ ಸಾವು

ಇತ್ತೀಚಿನ ಸುದ್ದಿ