ಎಸ್ ಟಿಎಫ್ ನಿಂದ ಕಾರ್ಯಾಚರಣೆ: ಎನ್ ಕೌಂಟರ್ ಗೆ ಕೊಲೆ, ದರೋಡೆ ಆರೋಪಿಗಳು ಬಲಿ

21/01/2025

ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಶಾಮ್ಲಿ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್‌ನಲ್ಲಿ ನಾಲ್ವರು ಆರೋಪಿಗಳನ್ನು ಕೊಂದಿದೆ.

ಶಾಮ್ಲಿಯ ಜಿಂಜಿನಾ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಈ ಸಂದರ್ಭದಲ್ಲಿ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಮೂವರನ್ನು ಮುಸ್ತಫಾ ಕಗ್ಗ ಗ್ಯಾಂಗ್ ಸದಸ್ಯ ಅರ್ಷದ್, ಆತನ ಸಹಚರರಾದ ಮಂಜೀತ್ ಮತ್ತು ಸತೀಶ್ ಎಂದು ಗುರುತಿಸಲಾಗಿದೆ.

ಎಸ್ಟಿಎಫ್ ಮೀರತ್ ತಂಡದೊಂದಿಗಿನ ಜಂಟಿ ದಾಳಿಯ ಸಮಯದಲ್ಲಿ ಅವರು ಬಲಿಯಾದರು” ಎಂದು ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಇನ್ಸ್ ಪೆಕ್ಟರ್ ಸುನಿಲ್ ಗಾಯಗೊಂಡಿದ್ದು, ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಸಹರಾನ್ಪುರದ ಬೆಹತ್ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದಲ್ಲಿ ಅರ್ಷದ್ ಬೇಕಾಗಿದ್ದ. ಆತನನ್ನು ಸೆರೆಹಿಡಿದವರಿಗೆ 1 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಲಾಗಿತ್ತು. ಅರ್ಷದ್ ವಿರುದ್ಧ ದರೋಡೆ, ಡಕಾಯಿತಿ ಮತ್ತು ಕೊಲೆಯ ಅನೇಕ ಪ್ರಕರಣಗಳು ದಾಖಲಾಗಿವೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version