ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದ ದೇವೇಗೌಡರು | ಕಾರಣ ಏನು ಗೊತ್ತಾ?

10/02/2021

ರಾಯಚೂರು: ರಾಜ್ಯದಲ್ಲಿ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜ್ಯ ಜೆಡಿಎಸ್ ವರಿಷ್ಠ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಜೆಡಿಎಸ್ ವರಿಷ್ಠ, ಹೆಚ್.ಡಿ. ದೇವೇಗೌಡ ಈ ಬಾರಿ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದು, 2023 ರಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಬಳಿ ಚುನಾವಣೆಗೆ ಹಣವಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಪಕ್ಷ ಕಟ್ಟುವುದಕ್ಕಾಗಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ. ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

Exit mobile version