ಉಪ್ಪಿಟ್ಟಿನಲ್ಲಿ ಹಾವಿನ ಮರಿ?: 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಯಾದಗಿರಿ: ವಸತಿ ಶಾಲೆಯೊಂದರಲ್ಲಿ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಬೆಂದಿದ್ದು, ಇದನ್ನು ಸೇವಿಸಿ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದ್ದು, ಪಾಲಕರಲ್ಲಿ ಆತಂಕ ಸೃಷ್ಟಿಯಾಗಿದೆ.
ವರದಿಗಳ ಪ್ರಕಾರ, ಯಾದಗಿರಿಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯವರ್ಧಕ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಘಟನೆಗೆ ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಮಕ್ಕಳು ಹಾಸ್ಟೆಲ್ ನ ಅವ್ಯವಸ್ಥೆಯ ಬಗ್ಗೆ ಹೇಳುತ್ತಿದ್ದರು. ಆದರೆ, ಮಕ್ಕಳು ಹಾಸ್ಟೆಲ್ ಇಷ್ಟವಾಗದೇ ಸುಳ್ಳು ಹೇಳುತ್ತಿದ್ದಾರೆ ಎಂದು ಅಂದುಕೊಂಡಿದ್ದೆವು. ಆದರೂ ಸಾಕಷ್ಟು ಬಾರಿ ಈ ಬಗ್ಗೆ ಆಡಳಿತ ಮಂಡಳಿಯವರ ಗಮನಕ್ಕೆ ತಂದಿದ್ದೆವು. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಘಟನೆಯ ಮಾಹಿತಿ ಪಡೆದ ಸ್ಥಳೀಯ ಶಾಸಕ ವೆಂಕಟರೆಡ್ಡಿ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇನ್ನೊಂದೆಡೆ ಆತಂಕದಿಂದ ಪಾಲಕರು ಆಸ್ಪತ್ರೆಯ ಕಡೆಗೆ ದೌಡಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಿಎಂ ಎದುರಲ್ಲೇ ನೊಂದವರನ್ನು ಎಳೆದು ಹಾಕಲು ಮುಂದಾದ ಪೊಲೀಸರು
ಅತಿಥಿಯಾಗಲು ಸದಾ ಸಿದ್ಧ ಆತಿಥೇಯರಾಗುವಿರಾ ?
ಮನೆ ಕೆಲಸದವರನ್ನು ಕೊಂದು 95 ಲಕ್ಷ ರೂ. ದೋಚಿದ ಐವರು ದರೋಡೆಕೋರರು ಅರೆಸ್ಟ್
ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗೆ ಕೋಲಾರ ಪ್ರವೇಶಕ್ಕೆ ನಿರ್ಬಂಧ!
ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ಮುಂದೂಡಿಕೆಯಾಗುವ ಸಾಧ್ಯತೆ!
ಕಾಲುಂಗುರ, ಕಾಲ್ಗೆಜ್ಜೆ ಕಳವು ಮಾಡಲು ಮಹಿಳೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು!