“ಉರಿ ನಂಜು” ಮಹಾದ್ವಾರ ರಾತ್ರೋ ರಾತ್ರಿ ತೆರವು!
ಮಂಡ್ಯ: ಟಿಪ್ಪು ಸುಲ್ತಾನ್ ಇತಿಹಾಸಕ್ಕೆ ಹಾನಿಯುಂಟು ಮಾಡಲು ಸೃಷ್ಟಿಸಿರುವ ಕಥಾಪಾತ್ರ ಎನ್ನಲಾಗುತ್ತಿರುವ ಉರಿಗೌಡ ಹಾಗೂ ದೊಡ್ಡ ನಂಜೇಗೌಡ ಅನ್ನೋ ಹೆಸರಿನಲ್ಲಿ ನಿರ್ಮಿಸಲಾಗಿರುವ ಮಹಾದ್ವಾರ ಕಟೌಟ್ ನ್ನು ತೆರವುಗೊಳಿಸಲಾಗಿದೆ.
ಪ್ರಧಾನಿ ಮೋದಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಪ್ರಧಾನಿ ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಈ ಉರಿ ನಂಜು ಫ್ಲೆಕ್ ಹಾಕಲಾಗಿತ್ತು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು.
ಈ ಕಟೌಟ್ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾತ್ರೋ ರಾತ್ರಿ ಉರಿ ನಂಜು ಫ್ಲೆಕ್ಟ್ ನ್ನು ತೆರವುಗೊಳಿಸಲಾಗಿದೆ. ಈ ಸ್ಥಳದಲ್ಲಿ ಬಾಲ ಗಂಗಾಧರ್ ನಾಥ್ ಸ್ವಾಮೀಜಿಯವರ ಮಹಾದ್ವಾರದ ಕಟೌಟ್ ಹಾಕುವ ಮೂಲಕ ವಿವಾದಕ್ಕೆ ಮುಕ್ತಿ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw