ಶೀಘ್ರದಲ್ಲಿ ಅಮೆರಿಕದ ಅಧ್ಯಕ್ಷ ಟ್ರಂಪ್ ಸೌದಿ ಅರೇಬಿಯಾಕ್ಕೆ ಭೇಟಿ

ಶೀಘ್ರದಲ್ಲಿ ಅಮೆರಿಕದ ಅಧ್ಯಕ್ಷ ಟ್ರಂಪ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನು ಅವರೇ ಬಹಿರಂಗಪಡಿಸಿದ್ದಾರೆ. ಈಗಾಗಲೇ ಗಾಝಾ ವಿಷಯಕ್ಕೆ ಸಂಬಂಧಿಸಿ ಅಮೆರಿಕ ಮತ್ತು ಸೌದಿ ಅರೇಬಿಯಾದ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ. ಸ್ವತಂತ್ರ ಫೆಲೆಸ್ತೀನ್ ಹೊರತಾದ ಯಾವುದೇ ಪರಿಹಾರವನ್ನು ತಾನು ಒಪ್ಪಲ್ಲ ಎಂದು ಸೌದಿ ಅರೇಬಿಯಾ ಹೇಳಿದರೆ ಗಾಝಾವನ್ನು ತಾನು ಸ್ವಾಧೀನ ಪಡಿಸಿಕೊಂಡು ಅದನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
ಸೌದಿ ರಾಜಕುಮಾರ ಮಹಮ್ಮದ್ ಬಿನ್ ಸಲ್ಮಾನ್ ಅವರು ದೊಡ್ಡ ವ್ಯಕ್ತಿಯಾಗಿದ್ದಾರೆ ಮತ್ತು ಅವರ ಜೊತೆ ನನಗೆ ಬಹಳ ಹತ್ತಿರದ ಗೆಳೆತನ ಇದೆ ಎಂದು ಈ ಹಿಂದೆ ಟ್ರಂಪ್ ಹೇಳಿದ್ದರು. ಇದೇ ವೇಳೆ ಅಮೆರಿಕದಲ್ಲಿ 600 ಬಿಲಿಯನ್ ಡಾಲರ್ ಅನ್ನು ಹೂಡಿಕೆ ಮಾಡುವುದಾಗಿ ಸೌದಿ ಅರೇಬಿಯಾ ತಿಳಿಸಿದೆ ಎಂದು ಕೂಡ ಟ್ರಂಪ್ ಹೇಳಿದ್ದರು. ಇದೀಗ ಫೆಲೆಸ್ತೀನ್ ಗೆ ಸಂಬಂಧಿಸಿ ಅಮೆರಿಕ ಮತ್ತು ಸೌದಿ ನಡುವೆ ಭಿನ್ನಾಭಿಪ್ರಾಯ ತಲೆದೋರಿರುವುದರಿಂದ ಇಬ್ಬರೂ ನಾಯಕರ ನಡುವಿನ ಭೇಟಿಯ ಫಲಿತಾಂಶ ಏನಾಗಲಿದೆ ಅನ್ನುವ ಕುತೂಹಲ ಜಾಗತಿಕವಾಗಿಯೇ ಮೂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj