ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಎರಡು ಪ್ರಕರಣದಲ್ಲಿ ಎಫ್.ಐ.ಆರ್.ದಾಖಲು - Mahanayaka
4:52 AM Saturday 22 - February 2025

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಎರಡು ಪ್ರಕರಣದಲ್ಲಿ ಎಫ್.ಐ.ಆರ್.ದಾಖಲು

fir
27/04/2023

ಚಾಮರಾಜನಗರ: ಚಾಮರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಎರಡು ಪ್ರಕರಣದಲ್ಲಿ ಎಫ್.ಐ.ಆರ್ .ದಾಖಲಿಸಲಾಗಿದೆ .

ಏಪ್ರಿಲ್ 17 ರಂದು ಮೆರವಣಿಗೆ ಗೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ.ಮರಿಸ್ವಾಮಿ ಅವರು ಮೆರವಣಿಗೆಗೆ ಅನುಮತಿ ಪಡೆದಿದ್ದರು.ಈ ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ಮಕ್ಕಳನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು ಚಾಮರಾಜನಗರ ಟೌನ್ ಪೊಲೀಸ್ ಠಾಣೆ ಯಲ್ಲಿ ಎಫ್.ಐ.ಆರ್ ‌.ದಾಖಲಾಗಿದೆ.

ಏಪ್ರಿಲ್ 19 ರಂದು ಮೆರವಣಿಗೆಗೆ ಚಾಮರಾಜನಗರ ಜಿಲ್ಲೆಯ ಬಿ.ಜೆ.ಪಿ.ಪಾರ್ಟಿಯ ಸಂಚಾಲಕರಾದ ನಾಗೇಂದ್ರ ಆರ್.ಎಲ್.ರವರು ಅನುಮತಿ ಪಡೆದಿದ್ದರು.ಈ ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ಮಕ್ಕಳನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಕಂಡುಬಂದಿದ್ದು ಚಾಮರಾಜನಗರ ಟೌನ್ ಪೊಲೀಸ್ ಠಾಣೆ ಯಲ್ಲಿ ಎಫ್.ಐ.ಆರ್.ದಾಖಲಾಗಿದೆ ಎಂದು ಚಾಮರಾಜನಗರ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ