ಮಾಜಿ ಸಚಿವ ಯು.ಟಿ.ಖಾದರ್ ಸಹೋದರನ ಮನೆಗೆ ಐಟಿ ದಾಳಿ - Mahanayaka

ಮಾಜಿ ಸಚಿವ ಯು.ಟಿ.ಖಾದರ್ ಸಹೋದರನ ಮನೆಗೆ ಐಟಿ ದಾಳಿ

18/02/2021

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರ ಸಹೋದರ ಇಫ್ತಿಕಾರ್ ಅವರ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವಂತ ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು, ಮುಖ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಪಾಲುದಾರರಾಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ