ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಆರಂಭ - Mahanayaka
10:37 PM Wednesday 12 - March 2025

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಆರಂಭ

uthara pradesha
23/02/2022

ಲಕ್ನೋ: ಉತ್ತರ ಪ್ರದೇಶದ ಒಂಬತ್ತು ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆಯಿಂದ 4ನೇ ಹಂತದ ಮತದಾನ ಆರಂಭವಾಗಿದೆ.

ಇಂದು ನಡೆಯುತ್ತಿರುವ ನಾಲ್ಕನೇ ಹಂತದ ಮತದಾನದಲ್ಲಿ ಪಿಲಿಭಿತ್‌, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯ್, ಉನ್ನಾವೋ, ಲಖನೌ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ 624 ಅಭ್ಯರ್ಥಿಗಳ ಭವಿಷ್ಯ ನಿರ್ಧರವಾಗಲಿದೆ.

9 ಜಿಲ್ಲೆಗಳಲ್ಲಿ 13,817 ಮತ ಕೇಂದ್ರಗಳನ್ನ ತೆರೆಯಲಾಗಿದ್ದು, 24,643 ಮತ ಯಂತ್ರಗಳನ್ನು ಇಡಲಾಗಿದೆ. ಸುಗಮ ಮತದಾನಕ್ಕಾಗಿ ಹಾಗೂ ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ 9 ಪೊಲೀಸ್ ವೀಕ್ಷಕರು, 57 ಸಾಮಾನ್ಯ ವೀಕ್ಷಕರು ಮತ್ತು 18 ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗವು ನಿಯೋಜಿಸಿದೆ.


Provided by

ಇವಿಎಂಗಳ ಸ್ಟ್ರಾಂಗ್ ರೂಂಗಳ ಭದ್ರತೆಯ ಜವಾಬ್ದಾರಿಯನ್ನು ಅರೆಸೇನಾ ಪಡೆಗಳಿಗೆ ನೀಡಲಾಗಿದೆ. ಜೊತೆಗೆ1 ಲಕ್ಷ 15 ಸಾವಿರದ 725 ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಗಾಗಲೇ ಎಲ್ಲಾ ಮತಗಟ್ಟೆಗಳ ಬಳಿ ಪೊಲೀಸ್​ ಸಿಬ್ಬಂದಿ ಆಯೋಜಿಸಲಾಗಿದ್ದು, ಹೆಚ್ಚುವರಿಯಾಗಿ 7,022 ಇನ್ಸ್‌ಪೆಕ್ಟರ್‌ಗಳು ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳು ಹಾಗೂ 58,132 ಹೆಡ್ ಕಾನ್ಸ್​ಟೇಬಲ್‌ಗಳು ಮತ್ತು ಕಾನ್ಸ್​ಟೇಬಲ್‌ಗಳನ್ನು ನಿಯೋಜಿಸಲಾಗಿದೆ.

2017ರ ಚುನಾವಣೆಯಲ್ಲಿ ಈ 59 ಕ್ಷೇತ್ರಗಳ ಪೈಕಿ 51 ಕ್ಷೇತ್ರಗಳನ್ನು ಬಿಜೆಪಿ, 4 ಕ್ಷೇತ್ರಗಳನ್ನು ಸಮಾಜವಾದಿ ಪಕ್ಷ ಮತ್ತು 3 ಕ್ಷೇತ್ರಗಳನ್ನು ಬಹುಜನ ಸಮಾಜ ಪಕ್ಷ ಗೆದ್ದುಕೊಂಡಿತ್ತು. ಅಪ್ನಾ ದಳ್ 1 ಕ್ಷೇತ್ರವನ್ನು ಗೆದ್ದುಕೊಂಡಿತ್ತು.

ಲಖಿಂಪುರ ಖೇರಿಯಲ್ಲಿ ಜೀಪು ಹರಿಸಿ ನಾಲ್ವರು ರೈತರ ಹತ್ಯೆಯ ಆರೋಪ ಹೊತ್ತಿರುವ ಆಶಿಶ್‌ ಮಿಶ್ರಾ ಅವರ ತಂದೆ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪ್ರಭಾವ ಎಷ್ಟಿದೆ ಎಂಬುದನ್ನು ಈ ಹಂತವು ಸ್ಪಷ್ಟಪಡಿಸಲಿದೆ. ಹತ್ಯೆ ಪ್ರಕರಣವು ರೈತರಲ್ಲಿ ಭಾರಿ ಆಕ್ರೋಶ ಉಂಟು ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೀನು ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ: ಮನನೊಂದ ಮಹಿಳೆ ಆತ್ಮಹತ್ಯೆ

ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ?

ಹಿಂದೂಗಳಿಗೆ ರಕ್ಷಣೆ ಒದಗಿಸಲಾಗದ ಸರ್ಕಾರ: ಬಿಜೆಪಿ ಸರ್ಕಾರದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

ಶಾರ್ಟ್ ಸರ್ಕ್ಯೂಟ್: ಖಾಸಗಿ ಬಸ್ ಬೆಂಕಿಗೆ ಆಹುತಿ

ಖ್ಯಾತ ಹಿರಿಯ ನಟಿ ಲಿಲಿತಾ ಇನ್ನಿಲ್ಲ: ಕಂಬನಿ ಮಿಡಿದ ಚಿತ್ರರಂಗ

 

ಇತ್ತೀಚಿನ ಸುದ್ದಿ