ದೆವ್ವ ಬಿಡಿಸುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ
ಉತ್ತರ ಪ್ರದೇಶ: ದೆವ್ವ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಮಂತ್ರವಾದಿಯೋರ್ವ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೂ ಆಕೆಯ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಂದಿರಲಿಲ್ಲ.
ಡಿಸೆಂಬರ್ 24ರಂದು ಬಾಲಕಿಯ ತಂದೆ ಮನೆಯಲ್ಲಿ ಇಲ್ಲದ ವೇಳೆ ಅವರ ಮನೆಗೆ ಆಗಮಿಸಿದ ಮಂತ್ರವಾದಿ ಅಶೋಕ್ ಕುಮಾರ್ (45) ಎಂಬಾತ ದೆವ್ವವನ್ನು ಬಿಡಿಸುವುದಾಗಿ ಬಾಲಕಿಯ ತಾಯಿಯನ್ನು ನಂಬಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ.
ಈ ವಿಚಾರ ತಿಳಿದ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರ ದೂರಿನನ್ವಯ ಪೊಲೀಸರು ಭಾನುವಾರ ಆರೋಪಿ ಮಂತ್ರವಾದಿಯನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw