15 ವರ್ಷದ ಬಾಲಕಿಯನ್ನು ಅಪಹರಿಸಿ 6 ತಿಂಗಳುಗಳ ಕಾಲ ಲೈಂಗಿಕ ದೌರ್ಜನ್ಯ
ಲಕ್ನೋ: 15 ವರ್ಷದ ಬಾಲಕಿಯನ್ನು ಅಪಹರಿಸಿ 6 ತಿಂಗಳುಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ.
ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದರು. ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.
ಶನಿವಾರ ದೊರೆತ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗದ್ವಾರ್ ಪ್ರದೇಶದಿಂದ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಲಕಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಕಳೆದ ಆರು ತಿಂಗಳಿನಿಂದ ಆರೋಪಿಯು ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ತಿಳಿಸಿದ್ದಾಳೆ. ಈ ಕುರಿತು ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw