ಉತ್ತರಪ್ರದೇಶ-ಉತ್ತರಾಖಂಡದಲ್ಲಿ ಬಿಎಸ್ ಪಿ ಮೈತ್ರಿ ಮಾಡಿಕೊಳ್ಳಲಿದೆಯೇ? | ಮಾಯಾವತಿ ಹೇಳಿದ್ದೇನು?
27/06/2021
ಲಕ್ನೋ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಜೊತೆಗೆ ಬಿಎಸ್ ಪಿ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಸುದ್ದಿಯನ್ನು ನಿರಾಕರಿಸಿದ ಅವರು, ಅಕಾಲಿ ದಳದ ಜೊತೆಗೆ ಮಾತ್ರವೇ ಬಿಎಸ್ ಪಿ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಪಂಜಾಬ್ ನ 117 ವಿಧಾನಸಭಾ ಸ್ಥಾನಗಳ ಪೈಕಿ ಬಿಎಸ್ ಪಿ ಹಾಗೂ ಅಕಾಲಿದಳ ಸೀಟು ಹಂಚಿಕೆ ಕೂಡ ಆಗಿದ್ದು, ಶಿರೋಮಣಿ ಅಕಾಲಿದಳ 97 ಮತ್ತು ಬಿಎಸ್ ಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಪಂಜಾಬ್ ಹೊರತುಪಡಿಸಿ ಬೇರಾವುದೇ ರಾಜ್ಯದಲ್ಲಿ ಬಿಎಸ್ ಪಿ ಮೈತ್ರಿ ಘೋಷಿಸಿಲ್ಲ. ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ.