SSLC ಹಾಗೂ PUC ಆದವರಿಗೆ ಅಂಗನವಾಡಿಯಲ್ಲಿ ಭರ್ಜರಿ 344 ಹುದ್ದೆಗಳು - Mahanayaka
8:02 PM Thursday 12 - December 2024

SSLC ಹಾಗೂ PUC ಆದವರಿಗೆ ಅಂಗನವಾಡಿಯಲ್ಲಿ ಭರ್ಜರಿ 344 ಹುದ್ದೆಗಳು

anganavadi
17/07/2024

10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Uttara Kannada district Anganwadi recruitment : ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 344 ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದ ಈ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಲೇಖನದಲ್ಲಿ ತಿಳಿಸಲಾಗಿರುವ ಅರ್ಹತೆಗಳು ಹಾಗೂ ಇತರೆ ಮಾಹಿತಿಯನ್ನು ತಿಳಿದುಕೊಂಡು ಕೆಳಗೆ ನೀಡಿರುವಂತಹ ಡೈರೆಕ್ಟ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ.

ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರ ನೇಮಕಾತಿಯ ಹುದ್ದೆಗಳ ವಿವರ :

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 344 ಹುದ್ದೆಗಳು ಖಾಲಿ ಇರುತ್ತದೆ. ಈ ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿರುತ್ತದೆ.

* ಅಂಗನವಾಡಿ ಸಹಾಯಕಿ ಹುದ್ದೆಗಳು – 263

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 81

eligibility criteria –

ಉತ್ತರ ಕನ್ನಡ ಜಿಲ್ಲೆಯ ಈ ಅಂಗನವಾಡಿ ಕೇಂದ್ರಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಹತೆಗಳನ್ನು ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

ವಯೋಮಿತಿ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 19 ವರ್ಷ ಹಾಗೂ 35 ವರ್ಷದ ವಯೋಮಿತಿಯಲ್ಲಿರಬೇಕು. ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವವರಿದ್ದರೆ ನಿಮಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿಯನ್ನು ಹೇಗೆ ಸಲ್ಲಿಸಬಹುದು?

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ನಂತರ ಅಧಿಕೃತ ಜಾಲತಾಣದ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ನೇಮಕಾತಿಗಾಗಿ ನಿಗದಿಪಡಿಸಿರುವ ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 12 ಜುಲೈ 2024

* ಕೊನೆಯ ದಿನಾಂಕ : ಆಗಸ್ಟ್ 12 2024

 ಅರ್ಜಿ ಸಲ್ಲಿಸಲು ಈ ಜಾಲತಾಣ ಮೇಲೆ ಒತ್ತಿರಿ : https://karnemakaone.kar.nic.in/abcd/ApplicationForm_JA_org.aspx


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ