ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ಖಾಯಂ ಹುದ್ದೆಗಳು: 42 ಸಾವಿರ ರೂ. ಸಂಬಳ
ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಉತ್ತರ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ.
Uttara Kannada District Court Recruitment — ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಹುದ್ದೆಗಳು ಖಾಲಿ ಇರುತ್ತವೆ. ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯವು ಹೊರಡಿಸಿದ ಈ ಸೂಚನೆಯ ಪ್ರಕಾರ ಅರ್ಹತೆಗಳನ್ನು ಹೊಂದಿರಬೇಕಾಗಿದ್ದು ಇದರ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
ನೇಮಕಾತಿ ಹುದ್ದೆಗಳ ಮಾಹಿತಿ – Vacancy Information :
ಉತ್ತರ ಕನ್ನಡ ಜಿಲ್ಲೆಯ ನ್ಯಾಯಾಲಯದಲ್ಲಿ ಒಟ್ಟು 26 ಹುದ್ದೆಗಳು ಖಾಲಿ ಇದ್ದು, 26 ಹುದ್ದೆಗಳ ವಿಂಗಡಣೆಯನ್ನು ಈ ಕೆಳಗಿನಂತಿದೆ.
* ಬೆರಳಚ್ಚು ನಕಲುಗಾರರು : 03
* ಬೆರಳಚ್ಚುಗಾರರು : 03
* ಆದೇಶ ಜಾರಿಕಾರರು : 20
ಅರ್ಹತೆಗಳು:
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸಾಗಿರಬೇಕು. ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
ವಯೋಮಿತಿ ಅರ್ಹತೆ: ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಹಾಗೂ ಗರಿಷ್ಟ 35 ವರ್ಷದ ಒಳಗಿರಬೇಕು. ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷದ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ – ₹21,400 ರಿಂದ ₹42,000.
ಅರ್ಜಿ ಸಲ್ಲಿಸುವವರು ಈ ಅರ್ಜಿ ಶುಲ್ಕವನ್ನು ಪಾವತಿಸಬೇಕು :
* ಜನರಲ್ ಕೆಟಗರಿ ಅಡಿಯಲ್ಲಿ ಬರುವವರು 200 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.
* ಹಿಂದುಳಿದ ವರ್ಗದ ಅಭ್ಯರ್ಥಿಗಳು ನೂರು ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.
* ಇವರನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ದಿನಾಂಕ ಜೂನ್ 20ನೇ ತಾರೀಕಿನಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 19, 2024
ಅಧಿಕೃತ ಜಾಲತಾಣದ ಅರ್ಜಿ ಸಲ್ಲಿಸುವ ಲಿಂಕ್: https://uttarakannada.dcourts.gov.in/online-recruitment/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: