ಪತಂಜಲಿಯ 5 ಔಷಧ ಉತ್ಪಾದನೆ ಸ್ಥಗಿತಕ್ಕೆ ಸೂಚನೆ
ಡೆಹ್ರಾಡೂನ್: ಉತ್ತರಾಖಂಡ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ಇಲ್ಲಿನ ದಿವ್ಯ ಫಾರ್ಮಸಿಗೆ ಪತಂಜಲಿ ಸಂಸ್ಥೆಗೆ ಸೇರಿದ ಐದು ಔಷಧಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದೆ.
ದಿವ್ಯ ಫಾರ್ಮಸಿಯು ಯೋಗ ಗುರು ರಾಮ್‌ದೇವ್ ಅವರ ಪತಂಜಲಿ ಉತ್ಪನ್ನಗಳನ್ನು ಉತ್ಪಾದಿಸುತ್ತದೆ. ಕೇರಳದ ವೈದ್ಯ ಕೆ.ವಿ.ಬಾಬು ಅವರು, ದಿವ್ಯ ಫಾರ್ಮಸಿಯು ಔಷಧಿ ಮತ್ತು ಸೌಂದರ್ಯವರ್ಧಕ ಕಾಯ್ದೆಯನ್ನು ಉಲ್ಲಂಘಿಸಿ ಔಷಧ ಉತ್ಪಾದಿಸುತ್ತಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಬೆನ್ನಲ್ಲೇ ಪ್ರಾಧಿಕಾರ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದೆ.
‘ಬಿಪಿಗ್ರಿಟ್, ಮಧುಗ್ರಿಟ್, ಥೈರೋಗ್ರಿಟ್, ಲಿಪಿಡೋಮ್ ಮಾತ್ರೆಗಳು ಮತ್ತು ಐಗ್ರಿಟ್ ಗೋಲ್ಡ್ ಮಾತ್ರೆಗಳನ್ನು ರಕ್ತದೊತ್ತಡ, ಮಧುಮೇಹ, ಗ್ಲುಕೋಮಾ ಮತ್ತು ಅಧಿಕ ಕೊಲೆಸ್ಟ್ರಾಲ್ ಕಾಯಿಲೆಗೆ ಔಷಧವೆಂದು ಬಿಂಬಿಸಲಾಗುತ್ತಿದೆ. ಕಂಪನಿಯು ಈ ಔಷಧಗಳ ಪರಿಷ್ಕೃತ ಸೂತ್ರೀಕರಣ ವಿವರವನ್ನು ಪ್ರಾಧಿಕಾರಕ್ಕೆ ಸಲ್ಲಿಸಿದ ನಂತರವಷ್ಟೇ ಇವುಗಳ ಉತ್ಪಾದನೆಯನ್ನು ಮರು ಆರಂಭಿಸಬಹುದು’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka