ಬಿಜೆಪಿಗೆ ಬಿಗ್ ಶಾಕ್: ಬಿಜೆಪಿ ತೊರೆದು ಪುತ್ರನೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಸಚಿವ! - Mahanayaka

ಬಿಜೆಪಿಗೆ ಬಿಗ್ ಶಾಕ್: ಬಿಜೆಪಿ ತೊರೆದು ಪುತ್ರನೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಸಚಿವ!

congress
12/10/2021

ಡೆಹ್ರಾಡೂನ್:  ಉತ್ತರಾಖಂಡ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು,  ಉತ್ತರಾಖಂಡದ ಸಾರಿಗೆ ಸಚಿವ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಶಾಸಕ ಸಂಜೀವ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೆವಾಲಾ ಮತ್ತು ಹರೀಶ್ ರಾವತ್ ಅವರ ಸಮ್ಮುಖದಲ್ಲಿ ಉತ್ತರಾಖಂಡದ ಸಾರಿಗೆ ಸಚಿವರು ಮತ್ತು ಪುತ್ರನೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರುವ ಮೊದಲು ಅವರು ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. 2017 ರಿಂದ 14 ರವರೆಗೆ ಉತ್ತರಾಖಂಡದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ಯಶಪಾಲ್, ನಂತರ ವಿಧಾನಸಭೆ ಸ್ಪೀಕರ್ ಆಗಿ ಹರೀಶ್ ರಾವತ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಅವರು ಮತ್ತೆ ಕಾಂಗ್ರೆಸ್ ಗೆ ಮರಳಿದ್ದಾರೆ. ಸದ್ಯ ಬಿಜೆಪಿ ಸರ್ಕಾರ ದೇಶಾದ್ಯಂತ ಜನಪ್ರಿಯತೆ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಬಿಜೆಪಿಯಿಂದ ಇತರ ಪಕ್ಷಗಳಿಗೆ ಸೇರ್ಪಡೆಗೊಳ್ಳುತ್ತಿರುವ ಪರಿಸ್ಥಿತಿ ಇದೀಗ ಕಂಡು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು ಉತ್ತಮ ನಾಗರಿಕನಾಗಲು ಹೇಗೆ ಸಾಧ್ಯ? | ಅಮಿತ್ ಶಾ

ಬೊಮ್ಮಾಯಿ ಸಂಪುಟದ 4 ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆ | 8 ಶಾಸಕರಿಗೆ ಶೀಘ್ರವೇ ಸಚಿವ ಸ್ಥಾನ!

ತುಳುನಾಡಿನ ಅಪ್ರತಿಮ ಅವಳಿ ವೀರರು ಕಾನದ-ಕಟದರು | ಸಂಚಿಕೆ-01

500ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಹಿರಿಯ ನಟ ನೆಡುಮುಡಿ ವೇಣು ನಿಧನ

ಪತ್ನಿಗೆ ಹಾವಿನಿಂದ ಕಚ್ಚಿಸಿ ಹತ್ಯೆ: ಪತಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಕೆರೆಗೆ ಹಾರಿ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖ

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಹತ್ಯೆ!

KSRTC ಬಸ್  ಮತ್ತು ಆಟೋ ಡಿಕ್ಕಿ: ಮದುಮಗ ಸೇರಿದಂತೆ ಮೂವರ ದಾರುಣ ಸಾವು

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಹತ್ಯೆ!

ಇತ್ತೀಚಿನ ಸುದ್ದಿ