ಸುರಂಗ ಆಪರೇಷನ್: 41 ಮಂದಿ ಕಾರ್ಮಿಕರಿಗೆ ವೈದ್ಯಕೀಯ ಚಿಕಿತ್ಸೆ; ಉತ್ತರಾಖಂಡ ಸಿಎಂ ಮಾಹಿತಿ - Mahanayaka

ಸುರಂಗ ಆಪರೇಷನ್: 41 ಮಂದಿ ಕಾರ್ಮಿಕರಿಗೆ ವೈದ್ಯಕೀಯ ಚಿಕಿತ್ಸೆ; ಉತ್ತರಾಖಂಡ ಸಿಎಂ ಮಾಹಿತಿ

29/11/2023

ಉತ್ತರಕಾಶಿಯಲ್ಲಿ ಸುರಂಗ ಕುಸಿತದಿಂದ ಒಳಗಡೆ ಸಿಲುಕಿದ್ದ 41 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತಂದಿದ್ದು, ಅವರನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ‌ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಎಲ್ಲಾ ಕಾರ್ಮಿಕರನ್ನು ರಕ್ಷಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕಾರ್ಮಿಕರೆಲ್ಲರೂ ವಿಭಿನ್ನ ಪರಿಸರ ಮತ್ತು ಸ್ಥಿತಿಯಿಂದ ಹೊರಬಂದಿದ್ದಾರೆ. ಆದ್ದರಿಂದ ನಾವು ವೈದ್ಯರ ಸಲಹೆಯಂತೆ ಅವರನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಲಾಗುವುದು ಎಂದಿದ್ದಾರೆ.

17 ದಿನಗಳಿಂದ ಸುರಂಗದೊಳಗಿನ ವಾತಾವರಣಕ್ಕೆ ಹೊಂದಿಕೊಂಡ ಅವರು, ಹೊರಗಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಮಯಾವಕಾಶ ಬೇಕಾಗಬಹುದು. ಅಲ್ಲಿಯವರೆಗೆ ವೈದ್ಯಕೀಯ ಮೇಲ್ವಿಚಾರಣೆ ನಡೆಸಬೇಕು ಎಂದು ವೈದ್ಯಕೀಯ ತಜ್ಞರು ಹೇಳಿದ್ದರು.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಎಲ್ಲ ಸದಸ್ಯರಿಗೆ ಧನ್ಯವಾದ ಹೇಳಿದ ಸಿಎಂ, ಪ್ರಧಾನಿ ಮೋದಿ ಅವರು ನಿರಂತರವಾಗಿ ನನ್ನೊಂದಿಗೆ ಸಂಪರ್ಕದಲ್ಲಿದ್ದು ರಕ್ಷಣಾ ಕಾರ್ಯದ ಅಪ್ಡೇಟ್ ತೆಗೆದುಕೊಳ್ಳುತ್ತಿದ್ದರು. ಅವರ ಬೆಂಬಲವಿಲ್ಲದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಅವರು ಇದೀಗ ನನ್ನೊಂದಿಗೆ ಮಾತನಾಡಿದ್ದಾರೆ. ಪ್ರತಿಯೊಬ್ಬರ ವೈದ್ಯಕೀಯ ತಪಾಸಣೆಯನ್ನು ಮಾಡಬೇಕು ಮತ್ತು ಅವರನ್ನು ಅವರ ಮನೆಗಳಿಗೆ ಕರೆದೊಯ್ಯಲು ಸೌಲಭ್ಯಗಳನ್ನು ಮಾಡಬೇಕು ಎಂದು ಅವರು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ