ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ: ಸುಬ್ರಮಣಿಯನ್‌ ಸ್ವಾಮಿ - Mahanayaka
11:12 AM Wednesday 13 - November 2024

ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ: ಸುಬ್ರಮಣಿಯನ್‌ ಸ್ವಾಮಿ

subramanian swamy
24/12/2021

ಬೆಂಗಳೂರು: ದೇಶದಲ್ಲಿ ಲಾಕ್‌ಡೌನ್‌ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ಇಂದು ಟ್ವಿಟರ್‌ನಲ್ಲಿ ಮಾರ್ಮಿಕ ಮಾತುಗಳನ್ನಾಡಿದ ಅವರು, ‘ಓಮೈಕ್ರಾನ್‌ಗಾಗಿ ಲಾಕ್‌ಡೌನ್ ಆಗಬಹುದು ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿ ಚುನಾವಣೆಯನ್ನು ಸೆಪ್ಟೆಂಬರ್‌ಗೆ ಮುಂದೂಡಿದರೂ ಆಶ್ಚರ್ಯಪಡಬೇಕಿಲ್ಲ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲಾಗದ್ದನ್ನು, ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು ಎಂದು ಅವರು ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟರ್‌ ಬಳೆದಾರರೊಬ್ಬರು ‘ ಮೋದಿಯವರು ಯೋಗಿ ಆದಿತ್ಯನಾಥರನ್ನು ವಜಾ ಮಾಡಲು ಬಯಸಿದ್ದರು. ಆದರೆ ಅದನ್ನು ನೇರವಾಗಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಷ್ಟ್ರಪತಿ ಆಡಳಿತವನ್ನು ಜಾರಿ ಮಾಡಿ ಯೋಗಿವರನ್ನು ಪಕ್ಕಕ್ಕೆ ಸರಿಸಲಿದ್ದಾರೆ. ಇದನ್ನೇ ಸುಬ್ರಮಣಿಯನ್‌ ಸ್ವಾಮಿ ಅವರು ತಮ್ಮ ಪೋಸ್ಟ್‌ನಲ್ಲಿ ಹೇಳಲು ಪ್ರಯತ್ನಿಸುತ್ತಿದ್ದಾರೆ, ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು

ಬಾಂಗ್ಲಾದೇಶ: ಚಲಿಸುತ್ತಿದ್ದ ಹಡಗಿನಲ್ಲಿ ಬೆಂಕಿ; 32 ಮಂದಿ ಸಾವು

ರಾಜಸ್ಥಾನ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ಉಡುಪಿ: ನೇಣು ಬಿಗಿದು ಅತಿಥಿ ಉಪನ್ಯಾಸಕ ಆತ್ಮಹತ್ಯೆ

ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಬೌದ್ಧ ಧರ್ಮಕ್ಕೆ ಸೇರ್ಪಡೆ: ಶಾಸಕ ಎನ್.ಮಹೇಶ್

ಇತ್ತೀಚಿನ ಸುದ್ದಿ