ಕಸ ಸಾಗಾಟದ ವಾಹನ ಚಾಲಕನ ಮೇಲೆ ಗೋರಕ್ಷಕರಿಂದ ಮಾರಣಾಂತಿಕ ಹಲ್ಲೆ

hathras
22/03/2022

ಮಥುರಾ: ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮಥುರಾದ ರಾಲ್ ಗ್ರಾಮದಲ್ಲಿ  ಗೋಮಾಂಸ ಮತ್ತು ಗೋವುಗಳ ಕಳ್ಳ ಸಾಗಾಣೆ ಮಾಡಿರುವ  ಆರೋಪ ಹೊರಿಸಿದ ಗೋರಕ್ಷಕರ ಗುಂಪೊಂದು, ಚಾಲಕನನ್ನು ಕಸ ಸಾಗಾಟದ ವಾಹನದ ಚಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ.

ಇನ್ನೂ ಚಾಲಕ ಚಲಾಯಿಸುತ್ತಿದ್ದ ವಾಹನದಲ್ಲಿ ಹಸು ಅಥವಾ ಗೋಮಾಂಸ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ 16 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು,  ದಾಳಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಹಲ್ಲೆಗೊಳಗಾಗಿರುವ ಚಾಲಕನನ್ನು ಮೊಹಮ್ಮದ್ ಆಸಿಫ್ ಎಂದು ಗುರುತಿಸಲಾಗಿದೆ. ಈತ ಹತ್ರಾಸ್ ನಲ್ಲಿರುವ ಸಿಕಂದರ್ ಗೆ ತೆರಳುತ್ತಿದ್ದರು. ರೌಲ್ ಗ್ರಾಮದ ಬಳಿ ತಲುಪಿದಾಗ ಗುಂಪೊಂದು ದಾಳಿ ನಡೆಸಿತ್ತು.

ಮೊಹಮ್ಮದ್ ಕೊಳಚೆಯನ್ನು ವಿಲೇವಾರಿ ಮಾಡುವ ಸ್ವಚ್ಛತಾ ಕಾರ್ಯಾಚರಣೆಯ ಭಾಗವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.  ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಗಿಯಿತೇ ಮಾಧ್ಯಮ ಬಹಿಷ್ಕಾರ ಅಭಿಯಾನ?

ಟಿಎಂಸಿ ಮುಖಂಡನ ಕೊಲೆಗೆ ಪ್ರತಿಕಾರ: ಮನೆಗೆ ಬೆಂಕಿ ಹಚ್ಚಿ 10 ಜನರನ್ನು ಕೊಂದ ಪಾಪಿಗಳು

ಮದುವೆಯ ಮರುದಿನವೇ ಕೆರೆಯಲ್ಲಿ ಶವವಾಗಿ ಪತ್ತೆಯಾದ ಯುವಕ

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

ಭಗವದ್ಗೀತೆ ಪ್ರಚಾರಕ್ಕೆ ಅಡಿಪಾಯ ಹಾಕಿದ್ದೇ ರಾಜೀವ್ ಗಾಂಧಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Exit mobile version