ವಾಹನ ಜಖಂಗೊಳಿಸಿದ ಆರೋಪ: ಹರ್ಷ ಸಹೋದರಿ ಅಶ್ವಿನಿ ಸಹಿತ 15 ಜನರ ವಿರುದ್ಧ ಎಫ್ ಐ ಆರ್ - Mahanayaka
6:09 AM Thursday 12 - December 2024

ವಾಹನ ಜಖಂಗೊಳಿಸಿದ ಆರೋಪ: ಹರ್ಷ ಸಹೋದರಿ ಅಶ್ವಿನಿ ಸಹಿತ 15 ಜನರ ವಿರುದ್ಧ ಎಫ್ ಐ ಆರ್

harsha
24/10/2022

ಶಿವಮೊಗ್ಗ: ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ವೇಳೆ ವಾಹನ ಜಖಂಗೊಳಿಸಿದ ಆರೋಪದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ​ಐಆರ್ ದಾಖಲಿಸಲಾಗಿದೆ.

ಸೈಯದ್ ಪರ್ವೇಜ್​ ಎಂಬುವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಜಾದನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ತನ್ನ ಕಾರನ್ನು ಜಖಂ ಗೊಳಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ 22 ರಂದು ಸಂಜೆ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಪ್ರಯುಕ್ತ ಬೈಕ್ ಜಾಥ ಆಯೋಜಿಸಲಾಗಿತ್ತು. ಅದರಂತೆ ನಗರದ ಅಮೀರ್ ಅಹ್ಮದ್ ವೃತ್ತದಿಂದ ಬೈಕ್ ಜಾಥಾ ನಡೆದಿತ್ತು. ಈ ಜಾಥಾದಲ್ಲಿ ಹರ್ಷ ಸಹೋದರಿ ಅಶ್ವಿನಿ ಕೂಡ ಭಾಗಿಯಾಗಿದ್ದರು.

ಜಾಥಾದ ವೇಳೆ  ಆಜಾದ್ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಇನೊವಾ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ನ್ನು ಹಾನಿಗೊಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ