ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಕೀಲ ರಾಜೇಶ್ ಭಟ್ ಜಾಮೀನು ಅರ್ಜಿ ತಿರಸ್ಕೃತ

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ರಾಜೇಶ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.
ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಧ್ರುವ, ಮಹಾಲಕ್ಷ್ಮೀ ಹೆಗ್ಡೆ, ಶಿವಾನಂದ ಅವರಿಗೆ ಜಾಮೀನು ಮಂಜೂರು ಮಾಡಿಸಿಕೊಳ್ಳಲು ಹಾಗೂ ರಾಜೇಶ್ ತಲೆ ಮರೆಸಿಕೊಳ್ಳಲು ಸಹಕರಿಸಿ ಬಂಧಿಸಲ್ಪಟ್ಟಿದ್ದ ಅನಂತ್ ಭಟ್ ಜಾಮೀನಿನ ಮೇಲೆ ಗುರುವಾ ಬಿಡುಗಡೆಗೊಂಡಿದ್ದಾರೆ.
ಆಗಸ್ಟ್ 8ರಂದು ತನ್ನ ಕಚೇರಿಯಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯನ್ನು ತನ್ನ ಚೇಂಬರ್ ಗೆ ಕರೆದು ಅಸಭ್ಯವಾಗಿ ವರ್ತಿಸಿ, ಲೈಂಗಿಕವಾಗಿ ಬಳಸಿಕೊಳ್ಳಲು ರಾಜೇಶ್ ಭಟ್ ಯತ್ನಿಸಿದ್ದ, ಈ ವೇಳೆ ಯುವತಿಯು ಸ್ಥಳದಿಂದ ತಪ್ಪಿಸಿಕೊಂಡಿದ್ದಳು ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka