ವಕೀಲರ ಮನೆಯಲ್ಲಿ ಕಳ್ಳತನ ಮಾಡಿದ ಅಪರಾಧಿಗೆ ಶಿಕ್ಷೆ
ಉಡುಪಿ: ವಕೀಲರ ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗೆ ನಗರದ ಪ್ರಧಾನ ಹಿರಿಯ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.
2022 ಫೆಬ್ರವರಿ 23ರಂದು ಫಿಲೀಪ್ ಪಿ.ತೋಮಸ್ ಎಂಬಾತನು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಉಡುಪಿ ತಾಲೂಕು ಯು.ಬಿ.ಎಮ್.ಸಿ.ಜುಬಿಲಿ ಚರ್ಚ್ ಹತ್ತಿರದಲ್ಲಿರುವ ವಕೀಲ ನೊವೆಲ್ ಪ್ರಶಾಂತ್ಕಾರ್ಕಡ ಅವರ ಮನೆಯ ಒಳಗೆ ಪ್ರವೇಶಿಸಿ ಮನೆಯ ಹಾಲ್ ನ ಟೇಬಲ್ ಮೇಲೆ ಇಟ್ಟಿದ್ದ ಲ್ಯಾಪ್ಟಾಪ್ ಮತ್ತು ಮೊಬೈಲ್ ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರಠಾಣೆ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಹಿರಿಯ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲ ಎಸ್. ಅವರು ಆರೋಪಿ ಫಿಲೀಪ್ ಪಿ.ತೋಮಸ್ ಎಂಬಾತನಿಗೆ 8 ತಿಂಗಳು ಸಾದ ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ.
ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ.ವಾದ ಮಂಡಿಸಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka