ಪೆಟ್ರೋಲ್ ಬಂಕ್ ಬಳಿ ವ್ಯಕ್ತಿ ಕುಸಿದು ಬಿದ್ದು ಸಾವು
31/08/2022
ಬೆಳ್ತಂಗಡಿ: ಕುಸಿದು ಬಿದ್ದು ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ಸಂಭವಿಸಿದೆ.
ಮತ ವ್ಯಕ್ತಿ ನಾಲ್ಕೂರು ಗ್ರಾಮದ ನಿವಾಸಿ ವಿಶ್ವನಾಥ ಪೂಜಾರಿ(47) ಎಂಬವರಾಗಿದ್ದಾರೆ. ಇವರು ಆ.27ರಂದು ಅಳದಂಗಡಿಯಲ್ಲಿ ಪೆಟ್ರೋಲ್ ಬಂಕ್ ಸಮೀಪ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು.
ಇವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾದರೂ ಅವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka