ವಾಮಾಚಾರಕ್ಕಾಗಿ ಜೀವಂತ ಗೂಬೆ ಸಾಗಾಟ: ಇಬ್ಬರ ಬಂಧನ
ಚಾಮರಾಜನಗರ: ವಾಮಾಚಾರಕ್ಕಾಗಿ ಜೀವಂತ ಗೂಬೆ ಸಾಗಾಟ ಮಾಡುತ್ತಿದ್ದಾಗ ಇಬ್ಬರು ಸಿಕ್ಕಿಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಬಂಧಿತ ಆರೋಪಿಗಳು. ಮಾಂತ್ರಿಕನೊಬ್ಬನಿಗೆ ಕೊಡಲು ಗೂಬೆ ಸಾಗಾಟ ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಗೂಬೆಯನ್ನು ರಕ್ಷಣೆ ಮಾಡಿದ್ದಾರೆ.
ಬಂಧಿತರ ಬೈಕ್ ವಶಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಅರಣ್ಯ ಸಂಚಾರಿ ದಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw