ಮಾವೋವಾದಿಗಳಿಂದ ಐಇಡಿ ಸ್ಫೋಟ: ವ್ಯಾನ್ ಚಾಲಕ,10 ಭದ್ರತಾ ಸಿಬ್ಬಂದಿ ಹುತಾತ್ಮ
ಬುಧವಾರ ಛತ್ತೀಸ್ ಗಢದಲ್ಲಿ ಮಾವೋವಾದಿಗಳು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಮಿನಿ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಭದ್ರತಾ ಅಧಿಕಾರಿಗಳು ಮತ್ತು ವ್ಯಾನ್ ಚಾಲಕ ಸಾವನ್ನಪ್ಪಿದ್ದಾರೆ.
ದಾಂತೇವಾಡದ ಅರನ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಇದು ತುಂಬಾ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಹೋರಾಟ ಕೊನೆಯ ಹಂತದಲ್ಲಿದೆ. ನಕ್ಸಲರನ್ನು ಬಿಡುವುದಿಲ್ಲ ಎಂದರು.
” ಹತ್ಯೆಯಾದ ಭದ್ರತಾ ಸಿಬ್ಬಂದಿಗಳು ಜಿಲ್ಲಾ ಮೀಸಲು ಗಾರ್ಡ್ (DRG), ಮಾವೋವಾದಿ-ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲು ವಿನ್ಯಾಸಗೊಳಿಸಲಾದ ರಾಜ್ಯ ಪಡೆಯಾಗಿದೆ. ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸಲು ಹೊರಟಿದ್ದರು. ತಂಡವು ತಮ್ಮ ಪ್ರಧಾನ ಕಚೇರಿಗೆ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಅರನ್ ಪುರ ರಸ್ತೆಯಲ್ಲಿ ಐಇಡಿ ಸ್ಫೋಟಗೊಂಡು 11 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಘೇಲ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಭರವಸೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw