ವಾಂತಿ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
ಬೆಳ್ತಂಗಡಿ: ನೆರಿಯ ಗ್ರಾಮದ ನೆಕ್ಕರೆ ಎಂಬಲ್ಲಿ ವ್ಯಕ್ತಿಯೋರ್ವ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತರೆಳಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ನಿವಾಸಿಯಾದ ಗೋಪಾಲ್ (55) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರೊಬ್ಬರೇ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದ್ದು ನೆರೆಮನೆಯವರು ಇವರ ಮನೆಗೆ ಹೋದಾಗ ಮೃತಪಟ್ಟಿರುವುದು ಪತ್ತೆಯಾಗಿದೆ.
ಅವರು ಮನೆಯ ಒಳಗಡೆ ಮಂಚದಿಂದ ಕೆಳಗಡೆ ಬಿದ್ದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಲಗಿದ್ದಲ್ಲಿ ವಾಂತಿ ಮಾಡಿರುವುದಿ ಕಂಡು ಬಂದಿದ್ದು ಯಾವುದೇ ರೀತಿಯ ವಿಷಸೇವಿಸಿರಬಹುದೇ ಅಧವಾ ಇನ್ಯಾವುದೇ ಕಾರಣದಿಂದ ಮೃತಪಟ್ಟಿರಬಹುದೆ ಎಂದು ಸ್ಪಷ್ಟವಾಗಿಲ್ಲ.
ಇವರಿಗೆ ಇಬ್ಬರು ಮಕ್ಕಳಿದ್ದು ಅವರು ಉದ್ಯೋಗ ನಿಮಿತ್ತ ಹೊರ ಹೋಗಿದ್ದರು ಎನ್ನಲಾಗಿದ್ದು, ಯಾವ ರೀತಿ ಮೃತ ಪಟ್ಟಿರಬಹುದು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಪೋಲಿಸ್ ತನಿಖೆಯಿಂದ ಸ್ಪಷ್ಟ ಮಾಹಿತಿ ತಿಳಿದು ಬರಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw