ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಹಿತ ಗಣ್ಯರಿಂದ ಸಂತಾಪ - Mahanayaka
9:20 PM Thursday 12 - December 2024

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಹಿತ ಗಣ್ಯರಿಂದ ಸಂತಾಪ

varun singh
15/12/2021

ನವದೆಹಲಿ: ತಮಿಳುನಾಡಿನಲ್ಲಿ ನಡೆದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಭಾರತೀಯ ವಾಯುಪಡೆಯ ಅನುಭವಿ ಪೈಲಟ್, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹಲವು ದಿನಗಳವರೆಗೆ ಸಾವು ಬದುಕಿನ ಹೋರಾಟ ನಡೆಸಿ ಬುಧವಾರ ನಿಧನರಾಗಿದ್ದಾರೆ.

ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಸಿಡಿಎಸ್ ಬಿಪಿನ್ ರಾವತ್ ಇದ್ದ ಹೆಲಿಕಾಫ್ಟರ್ ಪತನಗೊಂಡು 13 ಮಂದಿ ಅಂದೇ ಸಾವನ್ನಪ್ಪಿದ್ದರು. ಈ ಪೈಕಿ ವರುಣ್ ಸಿಂಗ್ ಮಾತ್ರವೇ ಬದುಕುಳಿದಿದ್ದರು. ಮೊದಲು ಅವರಿಗೆ ತಮಿಳುನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು. ಆದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.

ವರುಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್  ಅವರು ರಾಷ್ಟ್ರಕ್ಕೆ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ದೇಶಕ್ಕಾಗಿ ಅವರು ಸಲ್ಲಿಸಿದ ಉತ್ಕೃಷ್ಟ ಸೇವೆ ಎಂದಿಗೂ ಮೆರೆಯಲಾಗುವುದಿಲ್ಲ. ಅವರ ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ‘ಓಂ ಶಾಂತಿ’ ಎಂದು ಟ್ವೀಟ್ ಮಾಡಿದ್ದಾರೆ.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್  ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್,  ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು  ಸಂತಾಪ ಸೂಚಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನ ಕಥೆ ಮುಗಿದಿದೆ | ರಮೇಶ್ ಜಾರಕಿಹೊಳಿ

ಕುಡಿತದ ಮತ್ತಿನಲ್ಲಿ ಅಪ್ರಾಪ್ತ ವಯಸ್ಸಿನ ತನ್ನ ಮಗಳನ್ನೇ ಅತ್ಯಾಚಾರ ನಡೆಸಿದ ತಂದೆ!

ಏಕಾಏಕಿ ಎದ್ದು ನಿಂತು ಅಂಬೇಡ್ಕರ್ ಫೋಟೋ ಯಾಕೆ ಹಾಕಿಲ್ಲ? ಎಂದು ಪ್ರಶ್ನಿಸಿದ ಶಾಸಕ ಅನ್ನದಾನಿ | ಗರಂ ಆದ ಸ್ಪೀಕರ್

ಮುಸ್ಲಿಮ್ ವ್ಯಕ್ತಿಯ ಪಾರ್ಥಿವ ಶರೀರ ಸಾಗಿಸಲು ದಾರಿ ಮಾಡಿಕೊಟ್ಟ ಹನುಮ ಮಾಲಾಧಾರಿಗಳು!

ವಿಧಾನ ಪರಿಷತ್ ಫಲಿತಾಂಶ: ಕಾಂಗ್ರೆಸ್ ಗೆಲುವು ಸಾಧಿಸಿದ ಕ್ಷೇತ್ರಗಳು

ಇತ್ತೀಚಿನ ಸುದ್ದಿ